ದಕ್ಷಿಣ ಕನ್ನಡ

ನಾ.ಡಿಸೋಜಗೆ 'ಕಾರಂತ ಪ್ರಶಸ್ತಿ' ಪ್ರದಾನ

Published On :

ಮಂಗಳೂರು: ಕಾರಂತರ ಬದುಕು ಮತ್ತು ಸಾಹಿತ್ಯದಲ್ಲಿ ಪರಿಸರ ರಕ್ಷಣೆಯ ಸತ್ವ ಅಡಕವಾಗಿದ್ದು, ಅದನ್ನು ಮಾದರಿಯಾಗಿ ನಾಡನ್ನು ಅಪಾಯದ ಅಂಚಿನಿಂದ ಪಾರು ಮಾಡಬೇಕು ಎಂದು ಹಿರಿಯ ಸಾಹಿತಿ ನಾ.ಡಿಸೋಜ ಹೇಳಿದ್ದಾರೆ.
ಡಾ.ಶಿವರಾಮ ಕಾರಂತರ ಹುಟ್ಟುಹಬ್ಬ ಅಂಗವಾಗಿ ಗುರುವಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಕೂರ ಪ್ರತಿಷ್ಠಾನ ವತಿಯಿಂದ ಮಂಗಳೂರು ಪುರಭವನದಲ್ಲಿ ನೀಡಲಾದ 'ಕಾರಂತ ಪ್ರಶಸ್ತಿ' ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲೆಯ ನೆಲ, ಜಲ ಉಳಿಸಲು ಕಾರಂತರ ಹೋರಾಟ ಮನೋಭಾ ರೂಢಿಸಿಕೊಳ್ಳಬೇಕಾಗಿದೆ ಎಂದ ಅವರು, ಕರಾವಳಿ ಪರಿಸರ ನಾಶವಾಗುತ್ತಿದ್ದು, ಜೀವನದಿ ತಿರುಗಿಸುವ ಪ್ರಯತ್ನ ನಡೆಯುತ್ತಿದೆ. ಜೀವನ ಮಾರಕ ಎಂಡೋಸಲ್ಫಾನ್ ಇತ್ಯಾದಿಗಳಿಂದ ಜೀವನ ಆತಂಕಕ್ಕೆ ಕಾರಣವಾಗಿದೆ. ಕಾರಂತರ ಕೃತಿಗಳಲ್ಲೂ ಪರಿಸರದ ಸತ್ವ ಧಾರಾಳವಾಗಿದೆ ಎಂದರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರಶಸ್ತಿ ಪ್ರದಾನ ಮಾಡಿದರು.
ಉಡುಪಿ ಬಳಕೆದಾರರ ವೇದಿಕೆ ನಿರ್ದೇಶಕ ಶಾಂತರಾಜ ಐತಾಳ ಮತ್ತು ಯಕ್ಷಗಾನ ಕಲಾವಿದ ಮೂರೂರು ರಮೇಶ ಭಂಡಾರಿಗೆ 'ಕಲ್ಕೂರ ಪ್ರಶಸ್ತಿ' ನೀಡಲಾಯಿತು.
ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಐತಪ್ಪ ನಾಯ್ಕ, ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಕೆನರಾ ಬ್ಯಾಂಕ್ ಉಪಮಹಾಪ್ರಬಂಧಕ ರಾಜೇಂದ್ರನ್ ಹಾಜರಿದ್ದರು.
ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಾಸ್ತಾವಿಕ ಮಾತನಾಡಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.