ದಕ್ಷಿಣ ಕನ್ನಡ

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನವರಾತ್ರಿ ಸಂಭ್ರಮ

Published On :

ಬೆಳ್ತಂಗಡಿ: ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವ ಸಂಭ್ರಮ ಆರಂಭಗೊಂಡಿದ್ದು 13-14ರ ತನಕ ನಡೆಯಲಿವೆ.
ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 13ರ ವರೆಗೆ ನಡೆಯಲಿದೆ.
ಪ್ರತಿ ದಿನ ಸಂಜೆ 6ರಿಂದ ಭಜನಾ ಕಾರ್ಯಕ್ರಮ ಶ್ರೀ ದೇವಿ ಸಪ್ತಶತಿ ಪಾರಾಯಣ, ಮಹಾಪೂಜೆ ನಡೆಯಲಿದೆ ಎಂದು ಅನುವಂಶೀಯ ಆಡಳಿತ ಮೊಕ್ತೇಸರ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 14ರ ವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.
ಈ ಪ್ರಯುಕ್ತ 8ರಂದು ಪುತ್ತೂರಿನ ಅಖಿಲಾ ಪಜಿಮಣ್ಣು ಬಳಗದವರಿಂದ ಭಕ್ತಿಭಾವ ಸಂಗೀತ, 12ರಂದು ವೈದ್ಯಕೀಯ ಶಿಬಿರ, 13ರಂದು ಹರಿಕಥೆ, ಕೋಡಿ ರಮಾನಂದ ಕಾಮತ್ ಅವರ 'ನಗೋಣ ಬನ್ನಿ' ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಕಕ್ಕಿನಾಜೆ ಪ್ರಕಟಣೆ ತಿಳಿಸಿದೆ.
ನಿತ್ಯಾನಂದ ನಗರ: ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಕನ್ಯಾಡಿಯಲಿ 14ರ ವರೆಗೆ, ಪ್ರತಿಷ್ಠಾಪನೆಗೊಂಡಿರುವ  ನವದುರ್ಗೆಯರ ನವರಾತ್ರಿ ವಿಶೇಷ ಪೂಜೆ ನಡೆಯಲಿದೆ.
12ರಂದು ಚಂಡಿಕಾ ಯಾಗ ಮತ್ತು ದುರ್ಗಾಪರಮೇಶ್ವರಿ, ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪ್ರಕಟಣೆ ತಿಳಿಸಿದೆ.
ಓಡದಕರಿಯ: ಲಾಯ್ಲ ಓಡದಕರಿಯದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 14ರ ವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಮಹಾಪೂಜೆ, ಸೇವೆಗಳು, ರಾತ್ರಿ 7ರಿಂದ ಭಜನಾ ಮಂಡಳಿಗಳಿಂದ ಭಜನೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಧರ್ಮದರ್ಶಿ ಬಿ. ಚಂದ್ರಶೇಖರ ಪ್ರಕಟಣೆ ತಿಳಿಸಿದೆ.
ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 13ರ ವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ ಗಣಹೋಮ, ಚಂಡಿಕಹೋಮ, ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಸೇವೆಗಳು, ಸಂಜೆ ಭಜನಾ ಮಂಡಳಿಗಳಿಂದ ಭಜನೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಧರ್ಮದರ್ಶಿ ಯೋಗೀಶ್ ಪೂಜಾರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.