ರಂಗಕಲಾವಿದ ರಾಮಬಲ್ಯಾಯಗೆ 'ಶಾಂತ ಶ್ರೀ' ಪ್ರಶಸ್ತಿ ಪ್ರದಾನ
ಬಂಟ್ವಾಳ: ಕಲ್ಲಡ್ಕ ಶ್ರೀಶಾರದಾ ಪೂಜಾ ಉತ್ಸವ ಸಮಿತಿಯಿಂದ ಕೊಡಮಾಡುವ ದಿ. ಶಾಂತಾರಾಮ ಕಲ್ಲಡ್ಕರ ನೆನಪಿನ 'ಶಾಂತ ಶ್ರೀ' ಪ್ರಶಸ್ತಿಯನ್ನು ರಂಗಕಲಾವಿದ ರಾಮ ಬಲ್ಯಾಯರಿಗೆ ಶುಕ್ರವಾರ ಪ್ರದಾನ ಮಾಡಲಾಯಿತು.
ಕಲ್ಲಡ್ಕ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದ 36ನೇ ವರ್ಷದ ಶಾರದಾ ಪೂಜಾ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಮಾಜಿ ಶಾಸಕ ರುಕ್ಮಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಶಿಕ್ಷಕ ವಿನೋದ್ ಅಡ್ಕಸ್ಥಳರವರು ಧಾರ್ಮಿಕ ಉಪನ್ಯಾಸ ನೀಡಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಶ್ರೀರಾಮ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಿತೇಂದ್ರ ಎಸ್. ಕೊಟ್ಟಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಶಸ್ತಿ ಸ್ವೀಕರಿಸಿದ ರಾಮ ಬಲ್ಯಾಯರು ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ರಮೇಶ್ ಕಲ್ಲಡ್ಕ, ಲೋಕಯ್ಯ ಶೇರಾ, ಲಿಂಗಪ್ಪ ಕೊಟ್ಟಾರಿ, ಸಹಜ್ ರೈಯವರನ್ನು ಗಣ್ಯರು ಸಮಾರಂಭದಲ್ಲಿ ಸಮ್ಮಾನಿಸಿದರು.
ಕಲ್ಲಡ್ಕ ಶಾರದಾ ಪೂಜಾ ಉತ್ಸವ ಸಮಿತಿ ಅಧ್ಯಕ್ಷ ನಾಗರಾಜ ರಾಮನಗರ ಸ್ವಾಗತಿಸಿದರು. ಗೌರವಾಧ್ಯಕ್ಷ ಸೀತಾರಾಮ ಕಲ್ಲಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಯತಿನ್ ಕುಮಾರ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಜತೆ ಕೋಶಾಧಿಕಾರಿ ದಿನೇಶ ಕೃಷ್ಣ ಕೋಡಿ ಬಹುಮಾನಿತ ವಿಜೇತರ ಪಟ್ಟಿ ವಾಚಿಸಿದರು. ಉಪಾಧ್ಯಕ್ಷ ವಜ್ರನಾಥ ಮಡ್ಲಮಜಲು ವಂದಿಸಿದರು. ರಾಜೇಶ್ ಕೊಳಕೀರು ಕಾರ್ಯಕ್ರಮ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

