ದಕ್ಷಿಣ ಕನ್ನಡ

ಹೈನುಗಾರಿಕೆ ಕುರಿತು ಕಿರಿಯರಿಗೆ ಅರಿವು, ಮಾರ್ಗದರ್ಶನ ಅಗತ್ಯ: ರವಿರಾಜ ಹೆಗ್ಡೆ

Published On :

ಬಂಟ್ವಾಳ: ಯುವ ಸಮುದಾಯ ಹೈನುಗಾರಿಕೆಯಿಂದ ದೂರ ಸರಿಯುತ್ತಿರುವ ಈ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಯೊಂದಿಗೆ ಹೈನುಗಾರಿಕೆ ಉಳಿಯ ಬೇಕಾದರೆ ಹಿರಿಯರು ಕಿರಿಯರಿಗೆ ಮಾರ್ಗದರ್ಶನ ಮಾಡಬೇಕು. ಜೊತೆಗೆ ಇದರ ಪರಿಣಾಮದ ಅರಿವು ಮೂಡಿಸಬೇಕು ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಹೇಳಿದರು.
ಅವರು ಶುಕ್ರವಾರ ಮೊಡಂಕಾಪು ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಆಧುನಿಕ ವಿಧಾನದಲ್ಲಿ ಹೈನುಗಾರಿಕೆ ಮಾಡಿ ಕಡಿಮೆ ಖರ್ಚಿನೊಂದಿಗೆ ಹೆಚ್ಚು ಹಾಲು ಉತ್ಪಾದಿಸಿ ಯಶಸ್ವಿ ಜೀವನ ನಡೆಸ ಬಹುದಾಗಿದೆ ಎಂದರು.  
ಒಕ್ಕೂಟದ ನಿರ್ದೇಶಕ ಡಾ.ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಒಕ್ಕೂಟದ ನಿರ್ವಾಹಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ, ನಿರ್ದೇಶಕರಾದ ಪಿ. ಸುಚರಿತ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಧ.ಗ್ರಾ. ಯೋಜನೆಯ ಕೊಡಗು ಜಿಲ್ಲೆ ನಿರ್ದೇಶಕ ಪಿ. ರಾಧಾಕೃಷ್ಣ ರಾವ್, ಒಕ್ಕೂಟದ ವ್ಯವಸ್ಥಾಪಕ ಡಾ.ಜಿ.ವಿ. ಹೆಗಡೆ ಇದ್ದರು.
ಉಪವ್ಯವಸ್ಥಾಪಕ ಡಾ. ಸಂಪತ್‌ಕುಮಾರ್, ವಿಸ್ತರಣಾಧಿಕಾರಿ ಜಾನೆಟ್ ರೊಸಾರಿಯೋ ಹಾಗೂ ಮೊಡಕಾಂಪು ಹಾ.ಉ. ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.
ಸಂಘದ ಅಧ್ಯಕ್ಷ ಎಂ. ಮಹಾಬಲ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಎಂ. ಸತೀಶ್ ಶೆಟ್ಟಿ ಸಂಘದ ಪರಿಚಯ ವಾಚಿಸಿದರು. ನಿರ್ದೇಶಕ ದಿವಾಕರ ಶೆಟ್ಟಿ ಕೆ. ವಂದಿಸಿದರು. ಪುರಸಭಾ ಸದಸ್ಯ ದೇವದಾಸ್ ಶೆಟ್ಟಿ ಹಾಗೂ ಮಣಿಮಾಲ ಬಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.