ದಕ್ಷಿಣ ಕನ್ನಡ

ಬೆಂಕಿ ಅನಾಹುತ: ಬಟ್ಟೆ ಅಂಗಡಿ ಭಸ್ಮ

Published On :

ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಟೈಲರ್ ಅಂಗಡಿ ಸುಟ್ಟು ಭಸ್ಮವಾದ ಘಟನೆ ಅನಂತಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಇಲ್ಲಿನ ಬಾಬನಕಟ್ಟೆಯಲ್ಲಿರುವ ಶಶಿಧರ್ ಎಂಬವರಿಗೆ ಸೇರಿದ ಅಂಗಡಿ ಬೆಂಕಿಗಾಹುತಿಯಾಗಿದ್ದು, ಸಿಮೆಂಟ್ ಶೀಟ್ ಅಳವಡಿಸಿದ್ದ ಛಾವಣಿ ಸಹಿತ ಅಂಗಡಿಯೊಳಗಿದ್ದ ಬೆಲೆಬಾಳುವ ಬಟ್ಟೆಬರೆಗಳೂ ಬೆಂಕಿಗಾಹುತಿಯಾಗಿದ್ದು, ಸುಮಾರು ರು. 50 ಸಾವಿರ ನಷ್ಟ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ 1 ಗಂಟೆಯ ಸುಮಾರಿಗೆ ಈ ಅವಘಡ ನಡೆದಿದ್ದು, ಅಂಗಡಿಯ ಮುಂಭಾಗದಲ್ಲಿದ್ದ ಮನೆಯವರು ನೀಡಿದ ಮಾಹಿತಿ ಮೇರೆಗೆ ಶಶಿಧರ್ ಸ್ಥಳಕ್ಕೆ ಬರುವ ವೇಳೆಗೆ ಅಂಗಡಿಯಲ್ಲಿದ್ದ  ವಸ್ತುಗಳೆಲ್ಲಾ ಸುಟ್ಟು ಕರಕಲಾಗಿತ್ತು.
ದುಷ್ಕರ್ಮಿಗಳ ಕೃತ್ಯ ಶಂಕೆ: ಆಕಸ್ಮಿಕವಾಗಿ ಬೆಂಕಿಗಾಹುತಿಯಾಗದೆ ಎನ್ನಲಾಗಿದ್ದರೂ, ಇದು ಯಾರೋ ದುಷ್ಕರ್ಮಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಂಗಡಿಗೆ ವಿದ್ಯುತ್ ಸೌಲಭ್ಯವೂ ಇಲ್ಲವಾಗಿದ್ದು, ಭಾನುವಾರ ಮಧ್ಯಾಹ್ನದ ಬಳಿಕ ಶಶಿಧರ್ ಅಂಗಡಿಗೆ ಬಂದಿರಲಿಲ್ಲ.
 ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದೆಂದು ಶಂಕಿಸಲಾಗಿದೆ. ಅಂಗಡಿಯೊಳಗೆ ಆಸನದ ರೀತಿಯಲ್ಲಿ ಜೋಡಿಸಿದ್ದ ಸಿಮೆಂಟ್ ಹಲಗೆ ನಾಪತ್ತೆಯಾಗಿರುವುದೂ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಶಶಿಧರ್ ಕಳೆದ 15 ವರ್ಷಗಳಿಂದ ಇದೇ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸಿಕೊಂಡು ಬಂದಿದ್ದು, ಅವರು ಬಳಸುತ್ತಿದ್ದ ಹೊಲಿಗೆ ಯಂತ್ರವೂ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.