ದಕ್ಷಿಣ ಕನ್ನಡ

'ರಾಮಾಯಣ ಬರೆದು ಇತಿಹಾಸ ಸೃಷ್ಟಿಸಿದ ವಾಲ್ಮೀಕಿ'

Published On :

ಪುತ್ತೂರು: ನಾರದ ಮುನಿ ಹೇಳಿಕೊಟ್ಟ ರಾಮನಾಮ ಜಪದಿಂದಾಗಿ ತಪಸ್ವಿಯಾದ ವಾಲ್ಮೀಕಿ ಬಳಿಕ ರಾಮಾಯಣ ಎಂಬ ಮಹಾಕಾವ್ಯವನ್ನು ಬರೆದು ಇತಿಹಾಸ ಸೃಷ್ಟಿಸಿದರು ಎಂದು ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಡಾ. ಶೋಭಿತಾ ಸತೀಶ್‌ರಾವ್ ಹೇಳಿದರು.
ಅವರು ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ಸಮಾಜ ಕಲ್ಯಾಣಾ ಇಲಾಖಾ ವತಿಯಿಂದ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ, ವಾಲ್ಮೀಕಿ ಜೀವನದ ಕುರಿತು ತಿಳಿಸಿದರು.
ಪುತ್ತೂರು ಪುರಸಭಾ ಅಧ್ಯಕ್ಷೆ ವಾಣಿಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಪುತ್ತೂರು ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಸಂಪ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ ಇದ್ದರು.
ಪುತ್ತೂರು ತಹಸೀಲ್ದಾರ್ ಎಂ.ಟಿ. ಕುಳ್ಳೇಗೌಡ ಸ್ವಾಗತಿಸಿ, ಸಮಾಜ ಕಲ್ಯಾಣ ಅಧಿಕಾರಿ ದಯಾನಂದ ವಂದಿಸಿದರು.
ಸುಳ್ಯದಲ್ಲಿ:  ನಾಡ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯು ಸುಳ್ಯ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಪೂವಪ್ಪ ಕಣಿಯೂರು ಪ್ರಧಾನ ಉಪನ್ಯಾಸ ನೀಡಿದರು.
ತಹಸೀಲ್ದಾರ್ ಹಾಗೂ ನಾಡ ಹಬ್ಬಗಳ ದಿನಾಚರಣಾ ಸಮಿತಿಯ ಅಧ್ಯಕ್ಷ ಡಾ. ಔದ್ರಾಮ ಸ್ವಾಗತಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಎಸ್.ಬಿ. ರಾಜಶೇಖರ, ತಹಸೀಲ್ದಾರ್ ಜಯಶ್ರೀ, ಜಿ.ಪಂ. ಸದಸ್ಯ ನವೀನ್ ರೈ ಮೇನಾಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.