ಯೋಗ, ಪ್ರಕೃತಿಚಿಕಿತ್ಸೆಗೆ ಉಜ್ವಲ ಭವಿಷ್ಯ: ಡಾ. ಶಿವಕುಮಾರ್
ಬೆಳ್ತಂಗಡಿ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಇಂದು ಅತ್ಯಂತ ಹೆಚ್ಚಿನ ಬೇಡಿಕೆಯಿರುವುದರಿಂದ ಯೋಗ ಮತ್ತು ಪ್ರಕೃತಿ ಶಿಕ್ಷಣಕ್ಕೆ ಉಜ್ವಲ ಭವಿಷ್ಯವಿದೆ. ನಿಮ್ಮ ಜ್ಞಾನವನ್ನು ಜನರ ಆರೋಗ್ಯ ಸೇವೆಗೆ ಸಮರ್ಪಿಸಿಕೊಳ್ಳಿ ಎಂದು ದ.ಕ. ಜಿಲ್ಲಾ ವೈದ್ಯಾಧಿಕಾರಿ ಡಾ. ಶಿವಕುಮಾರ್ ಎಂ.ಎಸ್. ಹೇಳಿದರು.
ಅವರು ಭಾನುವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಯ ವತಿಯಿಂದ ವಿದೇಶಗಳಲ್ಲಿ ಮತ್ತು ಭಾರತದಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಬಗ್ಗೆಯಿರುವ ಅವಕಾಶಗಳ ಬಗ್ಗೆ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಇಂದುಅತ್ಯಂತ ಹೆಚ್ಚಿನ ಬೇಡಿಕೆಯಿದೆ. ಎಸ್ಡಿಎಂ ಶಿಕ್ಷಣ ಸಂಸ್ಥೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡಿದಂತೆ ಸರ್ಕಾರ ಈ ಬಗ್ಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದರು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಭವಿಷ್ಯಕ್ಕೆ ಪೂರಕವಾದುದು ಎಂದರು. ಡಿ. ಹರ್ಷೇಂದ್ರ ಕುಮಾರ್ 60ನೇ ಹುಟ್ಟುಹಬ್ಬದ ಪ್ರಯುಕ್ತ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ತರಬೇತಿ ಕಾರ್ಯಕ್ರಮದ ಮುಖ್ಯ ಸಂಯೋಜಕ ಡಾ. ಪ್ರದೀಪ್ ಕೆ. ಪ್ರಸ್ತಾಪಿಸಿದರು. ಅಚ್ಯುತನ್ ಈಶ್ವರ್, ಜಾಸ್ಮಿನ ಡಿ'ಸೋಜಾ ಕಾರ್ಯಕ್ರಮ ನಿರೂಪಿಸಿ, ಡಾ. ನರೇಂದ್ರ ಶೆಟ್ಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

