ದಕ್ಷಿಣ ಕನ್ನಡ

'ನಮೋ' ಬ್ಯಾನರ್ ಛಿದ್ರ

Published On :

ಉಪ್ಪಿನಂಗಡಿ:  ನರೇಂದ್ರ ಮೋದಿಯನ್ನು ಬೆಂಬಲಿಸಿ ಅಳವಡಿಸಲಾಗಿದ್ದ ಬೃಹತ್ ಗಾತ್ರದ ಕಟೌಟ್‌ನ್ನು ಅಪರಿಚಿತ ದುಷ್ಕರ್ಮಿಗಳು ಹರಿದ ಘಟನೆ ಉಪ್ಪಿನಂಗಡಿಯ ಓಡ್ಲ ಎಂಬಲ್ಲಿ ನಡೆದಿದೆ.
ನಮೋ ಭಾರತ ಅಭಿಮಾನಿ ಬಳಗ ಎಂಬ ಸಂಘಟನೆಯ ಆಶ್ರಯದಲ್ಲಿ ಹಾಕಲಾಗಿದ್ದ ಬ್ಯಾನರನ್ನು ಓಡ್ಲ ಸೇತುವೆ ಬಳಿ ಅಳವಡಿಸಲಾಗಿತ್ತು. ಭಾನುವಾರ ಮಧ್ಯರಾತ್ರಿಯ ಬಳಿಕ ಬ್ಯಾನರ್ ಹರಿದು ಹಾಕಿರುವುದು ಕಂಡು ಬಂದಿದೆ.
ಕೃತ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಅತ್ರಮಜಲು, ಇದೊಂದು ಹೇಡಿತನದ ಕೃತ್ಯವಾಗಿದ್ದು, ಜನತೆಯ ಭಾವನೆ ಮೇಲೆ ಮಾಡಲಾದ ಸವಾರಿಯಾಗಿದೆ. ಪೊಲೀಸರು ಈ ಬಗ್ಗೆ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಂಡು ಇಂತಹ ಹೀನ ಕೃತ್ಯ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕೆಂದು ಅಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.