ತೋಡಿಗೆ ಬಿದ್ದು ವ್ಯಕ್ತಿ ಸಾವು
ಸುಳ್ಯ: ಪೆರಾಜೆ ಗ್ರಾಮದ ಪೀಚೆ ಧನಂಜಯ (46) ಎಂಬವರು ಮನೆಯ ಸಮೀಪದ ರಸ್ತೆಯ ಬದಿಯಲ್ಲಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಕೃಷಿಕರಾಗಿರುವ ಇವರು ಮನೆಯಿಂದ ಕೋಟೆಶಾಲೆಯ ಹತ್ತಿರದ ಅಂಗಡಿಗೆಂದು ಮನೆಯ ಪಕ್ಕದಲ್ಲಿರುವ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಲ್ಲೇ ಸಮೀಪವಿದ್ದ ತೋಡಿಗೆ ಕಾಲು ಜಾರಿ ಬಿದ್ದರು. ಬಿದ್ದ ಪರಿಣಾಮವಾಗಿ ಅವರ ತಲೆಗೆ ಬಲವಾದ ಏಟಾಗಿದ್ದು, ಅವರು ಮೃತಪಟ್ಟರು. ತೋಟಕ್ಕೆ ಕೆಲಸಕ್ಕೆ ಬಂದಿದ್ದ ಚೆನ್ನಪ್ಪ ಎಂಬವರಿಗೆ ತೋಡಿನಲ್ಲಿ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡು ಬಂತು. ಆ ವೇಳೆಗಾಗಲೇ ಧನಂಜಯ ಅವರು ಕೊನೆಯುಸಿರೆಳೆದಿದ್ದರು. ಬಳಿಕ ಸ್ಥಳೀಯರಿಗೆ ಹಾಗೂ ಅವರ ಮನೆಯವರಿಗೆ ವಿಷಯ ತಿಳಿಸಿ, ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಸುಳ್ಯ: ಅಜ್ಜಾವರ ಗ್ರಾಮದ ಕರಿಯಮೂಲೆ ಗಂಗಾಧರ ನಾಯ್ಕರ ಪುತ್ರ ಜಗದೀಶ ನಾಯ್ಕ (24) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಭವಿಸಿದೆ. ಜಗದೀಶರು ಸುಳ್ಯ ದಸರಾ ಕಾರ್ಯಕ್ರಮಕ್ಕೆ ಬಂದಿದ್ದರಿಂದ ಅವರ ಪತ್ನಿ ಸುಜಾತ ಹಾಗೂ ಒಂದು ವರ್ಷದ ಮಗು ಅಲ್ಲೇ ಸಮೀಪದಲ್ಲಿರುವ ತನ್ನ ತಾಯಿಯ ಮನೆಗೆ ಹೋಗಿದ್ದರು. ಬೆಳಗ್ಗೆ ಸುಜಾತ ಮನೆಗೆ ಬಂದಾಗ ಗಂಡ ಮನೆಯೊಳಗೆ ವಿಷ ಕುಡಿದು ಒದ್ದಾಡುತ್ತಿರುವುದು ಕಂಡು ತಾಯಿ ಮನೆಯವರಿಗೆ ವಿಷಯ ತಿಳಿಸಿದರು. ನಂತರ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

