ದಕ್ಷಿಣ ಕನ್ನಡ

ಆ್ಯಂಬುಲೆನ್ಸ್ನಲ್ಲಿ ಅವಳಿ ಮಕ್ಕಳ ಜನನ

Published On :

ಉಪ್ಪಿನಂಗಡಿ: ಕಡಬದ 108 ಆ್ಯಂಬುಲೆನ್ಸ್ ವಾಹನದಲ್ಲಿ ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಕೊಂಬಾರು ಗ್ರಾಮದ ಬೊಟ್ಟಡ್ಕ ನಿವಾಸಿ ಶಶಿಧರ ಎಂಬವರ ಪತ್ನಿ ಶಕುಂತಳಾ (19) ಅವರನ್ನು ಭಾನುವಾರ ಕಡಬ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಎರಡು ಗಂಡು ಮಕ್ಕಳಿಗೆ ಜನ್ಮ ನೀಡಿದರು. ಆರೋಗ್ಯ ಕವಚ ತುರ್ತು ಚಿಕಿತ್ಸಕ ಚಂದ್ರಶೇಖರ್ ಸುಲಭ ಹೆರಿಗೆ ಮಾಡಿಸಿದ್ದಾರೆ. ಸಿಬ್ಬಂದಿಗಳಾದ ವಿಶ್ವನಾಥ, ಮಂಜು ಸಹಕರಿಸಿದರು. ತಾಯಿ- ಮಕ್ಕಳು ಆರೋಗ್ಯವಾಗಿದ್ದು, ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ  
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿಯಾಗಿ ಖಾದರ್ ಷಾ ಅಧಿಕಾರ ಮಂಗಳವಾರ ಸ್ವೀಕರಿಸಿದ್ದಾರೆ. ಜಿಲ್ಲಾ ವಾರ್ತಾಧಿಕಾರಿಯಾಗಿದ್ದ ರೋಹಿಣಿ ಅವರನ್ನು ಉಡುಪಿ ಜಿಲ್ಲೆಗೆ ವರ್ಗಾಯಿಸಲಾಗಿದೆ. ಮಂಗಳೂರು ನಿವಾಸಿ ಖಾದರ್ ಷಾ ದಕ್ಷಿಣ ಕನ್ನಡ ಜಿಲ್ಲೆಯ ಕೋರ್ಟ್ನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡದ್ದರು. ಮೂಡುಬಿದರೆ ಕೋರ್ಟ್ನಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿದ್ದರು.
ರೋಹಿಣಿ ಉಡುಪಿ ವಾರ್ತಾಧಿಕಾರಿ
ಉಡುಪಿ: ಜಿಲ್ಲೆಯ ನೂತನ ವಾರ್ತಾಧಿಕಾರಿಯಾಗಿ ರೋಹಿಣಿ ಕೆ. ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ವಾರ್ತಾಧಿಕಾರಿ ಖಾದರ್ ಶಾ ಅಧಿಕಾರ ಹಸ್ತಾಂತರಿಸಿದರು. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.