ಅಡಕೆ ಬೆಳೆಗಾರರ ಪರ ವಾದವಿರಲಿ: ಕ್ಯಾಂಪ್ಕೋ ಆಗ್ರಹ
ಮಂಗಳೂರು: ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ರಕ್ಷಣೆ ಮಾಡಬೇಕಾಗಿದ್ದು, ಕೇಂದ್ರ ಸರ್ಕಾರದ ವಕೀಲರು ಅಡಕೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ ತಮ್ಮ ವಾದ ಮಂಡಿಸುವಂತೆ ಕ್ಯಾಂಪ್ಕೋ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರವೂ ಬೆಳೆಗಾರರ ಪರವಾಗಿ ವಾದ ಮಂಡಿಸಲಿದೆ. ಆರೋಗ್ಯಕ್ಕೆ ಮಾರಕವಾದ ಯಾವುದೇ ವಸ್ತುವನ್ನು ನಿಷೇಧಿಸುವುದು ಪರಿಹಾರವಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಟ್ಕಾದಲ್ಲಿರುವ ಹಾನಿಕಾರಕ ಅಂಶಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವಂತೆ ಕೊಂಕೋಡಿ ಪದ್ಮನಾಭ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಗುಟ್ಕಾ ನಿಷೇಧ ಬಗ್ಗೆ ಇರುವ ದಾವೆಯಲ್ಲಿ ಅಡಕೆ ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ಕ್ಯಾಂಪ್ಕೋ ಸಂಸ್ಥೆಯ ನೇತೃತ್ವದಲ್ಲಿ ಸಿರಸಿಯ ಟಿಎಸ್ಎಸ್, ಶಿವಮೊಗ್ಗ ಮ್ಯಾಂಪ್ಕೋಸ್, ಚೆನ್ನಗಿರಿಯ ತುಮ್ಕೋಸ್ ಸಂಸ್ಥೆಗಳ ಪರವಾಗಿ ವಾದ ಮಂಡಿಸಲಾಗಿದೆ. ಕೇಂದ್ರ ಸರ್ಕಾರದಿಂದ ಈಗಾಗಲೇ ಗುಟ್ಕಾ ನಿಷೇಧ ಮಾಡಿದ ಬಗ್ಗೆ ಪ್ರಬಲ ವಾದ ಮಂಡಿಸಲಾಗಿದೆ.
ವಾಸ್ತವಿಕವಾಗಿ ಅಡಕೆ ಆರೋಗ್ಯಕ್ಕೆ ಹಾನಿಕರವಲ್ಲ, ಅಡಕೆ ಒಂದು ಔಷಧೀಯ ಸಸ್ಯ. ಭಾರತೀಯ ಸಂಸ್ಕೃತಿಯಲ್ಲಿ ಅಡಕೆಗೆ ವಿಶೇಷ ಸ್ಥಾನವಿದೆ. ಅಡಕೆಯಲ್ಲಿರುವ ಯಾವುದೇ ರಾಸಾಯನಿಕ ವಸ್ತುಗಳು ಮಾನವನಿಗೆ ಹಾನಿಕರವಲ್ಲ ಎಂಬುದನ್ನು ವೈಜ್ಞಾನಿಕ ದಾಖಲೆಯೊಂದಿಗೆ ಕ್ಯಾಂಪ್ಕೋ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲಿದೆ. ಅಡಕೆ ಬೆಳೆಗಾರರ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ನ್ಯಾಯವಾದಿಗಳಾದ ಕೆ.ಎನ್.ಭಟ್ ಮತ್ತು ಬಸವಪ್ರಭು ಪಾಟೀಲ್, ಹೈಕೋರ್ಟ್ನಲ್ಲಿ ಹಿರಿಯ ನ್ಯಾಯವಾದಿಗಳಾದ ಕೆ.ಎಂ.ನಟರಾಜ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಬೀನಾ ಮಾಧವನ್ ಕ್ಯಾಂಪ್ಕೋ ಪರವಾಗಿ ವಾದ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

