ಇಂದು, ನಾಳೆ ವಿದ್ಯುತ್ ಇಲ್ಲ
ಮಂಗಳೂರು: ಕುತ್ತಾರಿನಲ್ಲಿ ರಸ್ತೆ ಅಗಲೀಕರಣ ಸಲುವಾಗಿ 33ಕೆವಿ ಟವರ್ನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ಮತ್ತು 25ರಂದು ಮಧ್ಯಾಹ್ನ 12ರಿಂದ ಸಂಜೆ 5ರ ವರೆಗೆ 33/11 ಕೆವಿ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ವಿದ್ಯುತ್ ನಿಲುಗಡೆ ಪ್ರದೇಶ-ತೊಕ್ಕೊಟ್ಟು, ಉಳ್ಳಾಲ, ಕುತ್ತಾರ್, ಸೋಮೇಶ್ವರ, ಕೋಟೆಕಾರು ಹಾಗೂ ಸುತ್ತಲಿನ ಪ್ರದೇಶಗಳು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇಂದು ಡಿಸಿ ಕಚೇರಿ ಮುತ್ತಿಗೆ
ಮಂಗಳೂರು: ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಹತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅ.24ರಂದು ಬೆಳಗ್ಗೆ 12.30ಕ್ಕೆ ನಗರದಲ್ಲಿ ರ್ಯಾಲಿ ನಡೆಯಲಿದೆ. ವಿಶ್ವವಿದ್ಯಾಲಯ ಕಾಲೇಜು ಎದುರಿನಿಂದ ರ್ಯಾಲಿ ಹೊರಟು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ಕೇಂದ್ರ, ರಾಜ್ಯ ಸಚಿವರ ಪ್ರವಾಸ
ಮಂಗಳೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಕೋಡಿಕುನ್ನಿಲ್ ಸುರೇಶ್ ಮತ್ತು ರಾಜ್ಯ ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅ.24ರಂದು ಮಂಗಳೂರಿಗೆ ಭೇಟಿ ನೀಡುವರು. ಬೆಳಗ್ಗೆ 11ಕ್ಕೆ ಸಂಘನಿಕೇತನದಲ್ಲಿ ಇಎಸ್ಐ ಕಾರ್ಪೊರೇಶನ್ ಸಬ್ ರೀಜನಲ್ ಕಚೇರಿ ಉದ್ಘಾಟಿಸುವರು. ಮಧ್ಯಾಹ್ನ 2.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಭಾಗೀಯ ಮಟ್ಟದ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವರು.
ಇಂದಿನಿಂದ ಉಚಿತ ತಪಾಸಣೆ
ಮಂಗಳೂರು: ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಅ.24ರಿಂದ 26ರ ವರೆಗೆ ಉಚಿತ ಸರ್ಜರಿ ತಪಾಸಣಾ ಶಿಬಿರ ನಡೆಯಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಶಿಬಿರ ನಡೆಯಲಿದ್ದು, ರೇಡಿಯಾಲಜಿ ತಪಾಸಣೆಗೆ ಶೇ.20 ರಿಯಾಯ್ತಿ ಹಾಗೂ ಲ್ಯಾಬ್ ಪರೀಕ್ಷೆಗೆ ಶೇ.10 ರಿಯಾಯ್ತಿ ನೀಡಲಾಗುವುದು ಎಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಧುಸೂದನ ಉಪಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

