ಮರದ ದಿಮ್ಮಿ ಅಕ್ರಮ ಸಾಗಾಟ; ಲಾರಿ, ಬೈಕ್ ವಶ
ಸುಬ್ರಹ್ಮಣ್ಯ: ಅಕ್ರಮವಾಗಿ ಮರ ದಿಮ್ಮಿಗಳನ್ನು ಮಂಗಳವಾರ ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆಯವರು ದಾಳಿ ನಡೆಸಿ ಲಾರಿ ಮತ್ತು ಅದರೊಂದಿಗೆ ಇದ್ದ ಬೈಕ್ ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಲಾರಿ ಮತ್ತು ಬೈಕ್ನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಪಂಜ ಅರಣ್ಯ ಇಲಾಖೆಯ ನೆಲ್ಯಾಡಿ ಶಾಖೆಯ ಹಳೆನೇರಂಕಿ ಗ್ರಾಮದ ಇರಟ್ಟಾಡಿ ಎಂಬಲ್ಲಿ ಮಂಗಳವಾರ ರಾತ್ರಿ ಗಸ್ತುವಿನಲ್ಲಿದ್ದ ಇಲಾಖೆಯವರು ಈ ದಾಳಿ ನಡೆಸಿ ಇದನ್ನು ಪತ್ತೆ ಹಚ್ಚಿದ್ದಾರೆ. ಇದೇ ವೇಳೆ ಲಾರಿಯಲ್ಲಿ ಮತ್ತು ಬೈಕಿನಲ್ಲಿದ್ದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಲಾರಿಯಲ್ಲಿ 29 ಮರದ ದಿಮ್ಮಿಗಳು ಇದ್ದವು. ವಲಯಾರಣ್ಯಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿ ಶಿವಪ್ಪ ಧನದ, ಅರಣ್ಯ ರಕ್ಷಕರಾದ ಭರತೇಶ್, ಅಶೋಕ ಕೆ.ಆರ್, ಸಂತೋಷ್ ಹಾಗೂ ಮೋಹನ್ ಎಂ. ಪಾಲ್ಗೊಂಡಿದ್ದರು. ಸುಳ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮಂಗಳೂರು ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

