ದೊಡ್ಡಬಳ್ಳಾಪುರದಲ್ಲಿ ಎರಡನೇ ರಾಷ್ಟ್ರೀಯ ನಿರ್ಮಾಣ ಅಕಾಡೆಮಿ
ಮಂಗಳೂರು: ರಾಜ್ಯದಲ್ಲಿ ಕೌಶಲ್ಯ ಅಭಿವೃದ್ಧಿಗೆ 200 ಕೋಟಿ ವೆಚ್ಚದಲ್ಲಿ 'ರಾಷ್ಟ್ರೀಯ ನಿರ್ಮಾಣ ಅಕಾಡೆಮಿ' ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದೇಶದಲ್ಲಿ ಹೈದರಾಬಾದ್ನಲ್ಲಿ ಮಾತ್ರ ರಾಷ್ಟ್ರೀಯ ನಿರ್ಮಾಣ ಅಕಾಡೆಮಿ ಇದ್ದು, ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗುವ ಅಕಾಡೆಮಿ ದೇಶದ ಎರಡನೇ ಅಕಾಡೆಮಿ ಆಗಲಿದೆ. 20 ಎಕರೆ ಜಾಗದಲ್ಲಿ ಅಕಾಡೆಮಿ ನಿರ್ಮಾಣವಾಗಲಿದ್ದು, ಇದಕ್ಕೆ ಸರ್.ಎಂ. ವಿಶ್ವೇಶ್ವರಯ್ಯ ಹೆಸರನ್ನು ನಾಮಕರಣ ಮಾಡಲಾಗುವುದು. ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು' ಎಂದರು. 9 ಮಹಾನಗರ ಪಾಲಿಕೆಗಳಲ್ಲಿ ಕಾರ್ಮಿಕರಿಗೆ 130 ಕೋಟಿ ವೆಚ್ಚದಲ್ಲಿ ವಸತಿ ಯೋಜನೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.
ಸಹಾಯ ಧನ ಬಿಡುಗಡೆ
ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 2010- 11ನೇ ಸಾಲಿನ 2.98 ಕೋಟಿ ಸಹಾಯ ಧನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.
ಎಂಜಿನಿಯರಿಂಗ್ಗೆ ಪ್ರವೇಶ ಪಡೆದ 2989 ವಿದ್ಯಾರ್ಥಿಗಳಿಗೆ ಸಹಾಯ ಧನ ನೀಡುವುದಾಗಿ ಹೇಳಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದ್ದ ಕುರಿತಂತೆ 'ಕನ್ನಡಪ್ರಭ'ದಲ್ಲಿ ಗುರುವಾರ 'ಭರವಸೆ ಕೊಟ್ಟು ಕೈ ಎತ್ತಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ' ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ರಾಮೇಗೌಡ, 2989 ವಿದ್ಯಾರ್ಥಿಗಳ ಪ್ರಥಮ ವರ್ಷದ ಸಹಾಯಧನವನ್ನು ಆಯಾ ಕಾಲೇಜುಗಳಿಗೆ ಬಿಡುಗುಡೆ ಮಾಡಲು ಆದೇಶಿಸಿದ್ದಾರೆ. ಈ ಕುರಿತಂತೆ 'ಕನ್ನಡಪ್ರಭ'ಕ್ಕೆ ಮಾಹಿತಿ ನೀಡಿರುವ ನಿರ್ದೇಶಕರು, 'ಪ್ರಥಮ ವರ್ಷದ ಸಹಾಯ ಧನವನ್ನು ಬಿಡುಗಡೆ ಮಾಡಲು ಯಾವುದೆ ಸಮಸ್ಯೆಯಿರಲಿಲ್ಲ. ಈ ಹಿನ್ನೆಲೆಯಲ್ಲಿ ಗಮನಕ್ಕೆ ಬಂದ ಕೂಡಲೇ ಅನುದಾನ ನೀಡಲಾಗಿದೆ. ಉಳಿದ 3 ಶೈಕ್ಷಣಿಕ ವರ್ಷದ ಸಹಾಯ ಧನವನ್ನು ವಿದ್ಯಾರ್ಥಿಗಳ ತೇರ್ಗಡೆಯನ್ನು ಪರಿಶೀಲಿಸಿ ಶೀಘ್ರದಲ್ಲಿಯೇ ನೀಡಲಾಗುತ್ತದೆ' ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

