ದಕ್ಷಿಣ ಕನ್ನಡ

ನಾಳೆ ಸಮಾಲೋಚನಾ ಸಭೆ

Published On :

ಬಂಟ್ವಾಳ: ಒಡಿಯೂರು ಕ್ಷೇತ್ರದ ವಿಜಯ ರಜತ ಸಂಭ್ರಮದ ಅಂಗವಾಗಿ ಜ. 5 ರಂದು ಮಂಗಳೂರು ನಗರದಲ್ಲಿ ನಡೆಯಲಿರುವ 'ತುಳುನಾಡ ಜಾತ್ರೆ ತುಳುತೇರ್ ಒಯಿಪುಗ' ಕಾರ್ಯಕ್ರಮದ ಅಂಗವಾಗಿ ಮೂಡಾಯಿ ತೇರ್ ಕೂಟದ ಬೃಹತ್ ಸಮಾಲೋಚನಾ ಸಭೆಯು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶುಕ್ರವಾರ ಬಿ.ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.  
ರಮಾನಾಥ ರೈ ಪ್ರವಾಸ
ಮಂಗಳೂರು: ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಅ. 25 ರಂದು ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಗ್ಗೆ 11ಕ್ಕೆ ಬಂಟ್ವಾಳ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಕ್ಕೆ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆಯುವ ಸರ್ವ ಶಿಕ್ಷಣ ಅಭಿಯಾನದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವರು. ಅ. 26 ರಂದು ಬೆಳಗ್ಗೆ 9ಕ್ಕೆ ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉದ್ಘಾಟಿಸುವರು. ಬೆಳಗ್ಗೆ 10.30ಕ್ಕೆ ಬಂಟ್ವಾಳ ಹಿರಿಯ ವ್ಯವಹಾರಿಕ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಧಾಕಾರಿಯವರ ನೂತನ ನ್ಯಾಯಾಲಯ ಕಟ್ಟಡವನ್ನು ಉದ್ಘಾಟಿಸುವರು. ಬೆಳಗ್ಗೆ 11ಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯ್ತಿ ವತಿಯಿಂದ ನಡೆಯುವ ಸಾಮಾಜಿಕ ಅರಣ್ಯೀಕರಣ ಯೋಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4ಕ್ಕೆ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವರು.
ಇಂದು ವಿದ್ಯುತ್ ಕಡಿತ
ಮಂಗಳೂರು: ನಿಟ್ಟೂರು ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ನಡೆಯಲಿರುವುದರಿಂದ ಅ. 25 ರಂದು ಬೆಳಗ್ಗೆ 11 ರಿಂದ ಸಂಜೆ 3ರವರೆಗೆ ಎಲ್ಲ ಫೀಡರುಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಕ್ರಿಕೆಟ್ ಪಂದ್ಯಾವಳಿ
ವಿಟ್ಲ: ಸ್ಟೋರಂ ಪ್ಲೇಯರ್ಸ್ ಕಾನತ್ತಡ್ಕ ವತಿಯಿಂದ ಹೊನಲು ಬೆಳಕಿನ ಏಳು ಜನರ ಮುಕ್ತ ಅಂಡರ್ ಆಮರ್ ಕ್ರಿಕೆಟ್ ಪಂದ್ಯಾವಳಿ ಹಾಗೂ ಆಯ್ದ ಬಡಕುಟುಂಬಗಳಿಗೆ ಅಕ್ಕಿ ವಿತರಣೆ ಸಮಾರಂಭ ಅ.26ರಂದು ರಾತ್ರಿ 8 ಗಂಟೆಗೆ ಕಾನತ್ತಡ್ಕ ಶಾಲೆ ಮೈದಾನದಲ್ಲಿ ನಡೆಯಲಿದೆ ಎಂದು ಕಾನತ್ತಡ್ಕ ಸ್ಟೋರಂ ಪ್ಲೇಯರ್ಸ್ನ ಅನಸ್ ಎಂ.ಎಂ.ಕೆ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.