ಅನ್ನ, ಕ್ಷೀರಭಾಗ್ಯ ಅನುಷ್ಠಾನದಲ್ಲಿ ಉದಾಸೀನ ತೋರಿದರೆ ಕಠಿಣ ಕ್ರಮ: ಸಚಿವ ರೈ ಎಚ್ಚರಿಕೆ
ಬಂಟ್ವಾಳ: ಅನ್ನಭಾಗ್ಯ ಹಾಗೂ ಕ್ಷೀರಭಾಗ್ಯ ಯೋಜನೆ ಅನುಷ್ಠಾನದಲ್ಲಿ ಉದಾಸೀನ ಪ್ರವೃತ್ತಿ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಬಿ. ರಮನಾಥ ರೈ ಎಚ್ಚರಿಸಿದ್ದಾರೆ.
ಬಿ.ಸಿ. ರೋಡ್ನ ಎಸ್ಜೆಎಸ್ಆರ್ವೈ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕಿನ ತ್ರೈ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನೆಟ್ಲಮುಡ್ನೂರಿನಲ್ಲಿ ನಡೆದ ಕ್ಷೀರಬಾಗ್ಯ ಕಾರ್ಯಕ್ರಮದ ನೆಪದಲ್ಲಿ ಸ್ಥಳೀಯ ಶಾಲೆಯೊಂದರ ನಿವೃತ್ತಿ ಅಂಚಿನಲ್ಲಿರುವ ಮುಖ್ಯ ಶಿಕ್ಷಕಿಯನ್ನು ನಿಯೋಜನೆಯ ಮೇರೆಗೆ ವರ್ಗಾಯಿಸಲಾಗಿದೆ. ಎಸ್ಡಿಎಂಸಿಯ ಅಭಿಪ್ರಾಯ ಪಡೆಯದೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆಂದು ಜಿ.ಪಂ. ಸದಸ್ಯ ಚೆನ್ನಪ್ಪ ಕೋಟ್ಯಾನ್ ಸಭೆಯ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಂತಹ ಸಮಸ್ಯೆಗಳು ಎದುರಾದಾಗ ಅಲ್ಲಿಯೇ ಸರಿಪಡಿಸಬೇಕು. ಸಭೆಯಲ್ಲಿ ಮಾತನಾಡಿದರೆ ಅದಕ್ಕೆ ಇನ್ನಷ್ಟು ರೆಕ್ಕೆಪುಕ್ಕಗಳು ಹುಟ್ಟಿಕೊಳ್ಳುತ್ತವೆ. ಇದಕ್ಕೆಲ್ಲ ಅವಕಾಶ ಕೊಡಬೇಡಿ. ಪ್ರಕರಣಕ್ಕೆ ಸಂಬಂಧಪಟ್ಟ ಮುಖ್ಯ ಶಿಕ್ಷಕಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
29ರಂದು ಪಿಂಚಣಿ ಅದಾಲತ್: ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ನಿಟ್ಟಿನಲ್ಲಿ ಅ.29ರಂದು ಬಿ.ಸಿ. ರೋಡ್ನಲ್ಲಿ ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸುವಂತೆ ತಹಸೀಲ್ದಾರ್ ಮಲ್ಲೇಸ್ವಾಮಿ ಅವರಿಗೆ ಸಚಿವ ರೈ ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಪ್ರಮಾಣಪತ್ರ ಸೇರಿದಂತೆ ವಿವಿಧ ಯೋಜನೆಯಡಿ ಸವಲತ್ತುಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ತಾಲೂಕಿನ ಎಲ್ಲ ಇಲಾಖಾಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ನಿರ್ದೇಶಿಸಿದರು.
ಪ್ರಾ.ಆ. ಕೇಂ.ದಲ್ಲಿ ವೈದ್ಯರ ಕೊರತೆ: ತಾಲೂಕಿನ ಮಂಚಿ, ಪುಂಜಾಲಕಟ್ಟೆ, ಮಾಣಿ ಸಹಿತ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ್ ಸಚಿವರ ಪ್ರಶ್ನೆಯೊಂದಕ್ಕೆ ಮಾಹಿತಿ ನೀಡಿದರು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಸ್ಥಳೀಯ ವೈದ್ಯರನ್ನು ಬಳಸಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು. ಈ ಹಿಂದೆಯೇ ಈ ಬಗ್ಗೆ ಪ್ರಯತ್ನ ನಡೆಸಿದ್ದೇವೆ ಆದರೆ ಯಾರೂ ವೈದ್ಯರು ಮುಂದೆ ಬರುವುದಿಲ್ಲ ಎಂದು ಡಾ. ಮಂಜುನಾಥ್ ಅಸಹಾಯಕತೆ ವ್ಯಕ್ತ ಪಡಿಸಿದರು. ಈಗಾಗಲೇ ಪ್ರಗತಿ ಹಂತದಲ್ಲಿರುವ ನೂರು ಹಾಸಿಗೆಯ ತಾಲೂಕು ಆಸ್ಪತ್ರೆಯ ಮೊದಲ ಹಂತದ ಕಾಮಗಾರಿ ಮುಂದಿನ ಫೆಬ್ರವರಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

