ಬಂಟ್ವಾಳ ತಾಲೂಕಿನ ಶಾಲೆಗಳಿಗೆ 11.39 ಕೋಟಿ ಅನುದಾನ ಬಿಡುಗಡೆ: ರೈ
ಬಂಟ್ವಾಳ: 2013-14 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿಗೆ ಸರ್ವ ಶಿಕ್ಷಣ ಅಭಿಯಾನ, ಡಯಟ್, ಶಾಲಾನುದಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಿಂದ ಒಟ್ಟು 11.39 ಕೋಟಿ ಅನುದಾನ ಬಿಡುಗಡೆಗೊಂಡಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಗುರುವಾರ ಬಿ.ಸಿ. ರೋಡ್ನ ತಾಪಂ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ವಿವರವನ್ನು ಮಾಧ್ಯಮಗಳ ಮುಂದಿಟ್ಟರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುದಾನದಿಂದ ಸಾಕಷ್ಟು ತರಗತಿ ಕೋಣೆಗಳು, ಕಂಪ್ಯೂಟರ್ ಆಧಾರಿತ ಶಿಕ್ಷಣ, ಗ್ರಂಥಾಲಯ, ಹೆಣ್ಣು ಮಕ್ಕಳ ಶೌಚಾಲಯ, ವಿಶೇಷ ಶೌಚಾಲಯ, ಆವರಣಗೋಡೆ, ವಿಜ್ಞಾನೋಪಕರಣಳನ್ನು ಶಾಲೆ ಮಕ್ಕಳಿಗೆ ಒದಗಿಸಲಾಗುತ್ತಿದೆ. ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಎಂದು ಹೇಳಿದರು.
ಸಮುದಾಯದ ಸಹಭಾಗಿತ್ವ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರ ಸಕ್ರಿಯ ಪಾಲ್ಗೊಳ್ಳುವಿಕೆ, ಅನುದಾನಗಳ ಸದ್ಬಳಕೆಯೊಂದಿಗೆ ಯೋಜನೆಯು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ತಾಪಂ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ್, ಸ್ಥಾಯಿಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ತಾಪಂ ಇಒ ವಿಶ್ವನಾಥ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಸಮನ್ವಯಾಧಿಕಾರಿ ಕಮಲಾಕ್ಷ ಕಲ್ಲಡ್ಕ, ರಮಾನಂದ ಉಪಸ್ಥಿತರಿದ್ದರು.
ನವೆಂಬರ್ನಲ್ಲಿ ಮಕ್ಕಳ ಗಣತಿ...: ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ಸಮೀಕ್ಷಾ ಕಾರ್ಯ ನವೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ನಡೆಯಲಿರುವ ಈ ಸಮೀಕ್ಷಾ ಕಾರ್ಯವು ಜನಪ್ರತಿನಿಧಿಗಳ, ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಲಿದೆ.
ನ.6 ಮತ್ತು 7 ರಂದು ತಾಲೂಕಿನ 386 ಶಾಲೆಗಳಲ್ಲಿ ಸಮೀಕ್ಷಾ ಕಾರ್ಯ ನಡೆಯಲಿದ್ದು, ನ.13 ರಿಂದ 17 ರವರೆಗೆ 5 ದಿನಗಳ ಕಾಲ ತಾಲೂಕಿನಲ್ಲಿ ಈಗಾಗಲೇ ಗುರುತಿಸಲಾದ 49,456 ಕುಟುಂಬಗಳ ಸಮೀಕ್ಷೆ ನಡೆಯಲಿದೆ. ಶಾಲೆಬಿಟ್ಟ ಮಕ್ಕಳು ಮತ್ತು ವಲಸೆ ಮಕ್ಕಳು ಕಂಡು ಬಂದಲ್ಲಿ ಹತ್ತಿರದ ಶಾಲೆಗಳ ಗಮನಕ್ಕೆ ತರುವಂತೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

