ಸೌಜನ್ಯಾ ಪ್ರಕರಣದ ಪ್ರತಿಭಟನೆ ವ್ಯಕ್ತಿ, ಸಂಸ್ಥೆ ವಿರುದ್ಧವಲ್ಲ; ಕೇಮಾರು ಶ್ರೀ
ಕನ್ನಡಪ್ರಭ ವಾರ್ತೆ , ಬೆಳ್ತಂಗಡಿ , ಅ.25
ಧರ್ಮಸ್ಥಳ ಪರಿಸರದಲ್ಲಿ ಕೆಲವು ವರ್ಷಗಳಿಂದ ಅಸಹಜವಾಗಿ ಮೃತಪಟ್ಟ ಪದ್ಮಲತಾ, ಸೌಜನ್ಯಾ, ವೇದವಲ್ಲಿ ಹಾಗೂ ಅನಾಮಧೇಯರಾಗಿ ಜೀವಕಳೆದುಕೊಂಡ ನೂರಾರು ಮಂದಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಪ್ರಜಾಪ್ರಭುತ್ವ ವೇದಿಕೆಯಡಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ಸೌಜನ್ಯಾಗೆ ನ್ಯಾಯ ಕೇಳಿ ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ, ಮಡಂತ್ಯಾರು, ಅಳದಂಗಡಿ, ನಾರಾವಿ ಸೇರಿದಂತೆ ತಾಲೂಕಿನಾದ್ಯಂತ ಅಂಗಡಿ ಮಾಲೀಕರು ತಮ್ಮ ವ್ಯವಹಾರಗಳನ್ನು ನಿಲ್ಲಿಸಿ ಸ್ಯಯಂಪ್ರೇರಿತ ಬಂದ್ ಆಚರಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಇದರಿಂದ ಬೆಳ್ತಂಗಡಿ ಹಾಗು ಸುತ್ತಮುತ್ತ ವಾಹನ ಸಂಚಾರಕ್ಕೆ ಸಂಪೂರ್ಣ ಅಡಚಣೆಯುಂಟಾಯಿತು.
ಪ್ರತಿಭಟನೆ ವ್ಯಕ್ತಿ, ಸಂಸ್ಥೆ ವಿರುದ್ಧವಲ್ಲ: ಸಭೆಯಲ್ಲಿ ಮಾತನಾಡಿದ ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ನಾವು ನಡೆಸುವ ಪ್ರತಿಭಟನೆ ಕಾನೂನು ರೀತಿಯೇ ಹೊರತು, ಯಾವುದೇ ವ್ಯಕ್ತಿ ಅಥವಾ ಧಾರ್ಮಿಕ ಸಂಸ್ಥೆಯ ವಿರುದ್ಧ ಅಲ್ಲ. ದೇವರು ಪ್ರೀತಿ ಮಾಡುವ ವಸ್ತುವೇ ಹೊರತು ಭಯ ಹುಟ್ಟಿಸುವ ಶಕ್ತಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಹೋರಾಟಗಾರ, ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ಮಾತನಾಡಿ, ಸೌಜನ್ಯಾ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ನಡೆಸುವಂತಾಗಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

