ದಕ್ಷಿಣ ಕನ್ನಡ

ಬೈಕ್- ರಿಕ್ಷಾ ಡಿಕ್ಕಿ: ಓರ್ವನಿಗೆ ಗಾಯ

Published On :

ಬ್ರಹ್ಮಾವರ: ಉಡುಪಿ ತಾಲೂಕು ವಾರಂಬಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಎಸ್.ಎಮ್.ಎಸ್. ಚರ್ಚ್ ಬಳಿ ಬೈಕ್  ಹಾಗೂ ರಿಕ್ಷಾ ಮುಖಾಮುಖಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಗಾಯಗೊಂಡವರನ್ನು ಅಜರುದ್ದೀನ್ ಎಂದು ಗುರುತಿಸಲಾಗಿದೆ. ರಿಕ್ಷಾ ಸವಾರ ರತ್ನಾಕರ ಎಂಬವರು ರಿಕ್ಷಾವನ್ನು ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಅತೀ ವೇಗ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದಿರುವುದೇ ಈ ಅನಾಹುತ ಸಂಭವಿಸಲು ಕಾರಣ ಎಂಬುದಾಗಿ ಶಬ್ಬೀರ್ ನೀಡಿದ ದೂರಿನಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ಬಂಟ್ವಾಳ: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗ್ರಿಯಲ್ಲಿ ಶನಿವಾರ ನಡೆದಿದೆ. ಅಮ್ಟೂರು ಗ್ರಾಮದ ಕರಿಂಗಾಣ ನಿವಾಸಿ ಕೃಷ್ಣಪ್ಪ ಮೂಲ್ಯ (34) ಮೃತರು. ಇವರು ಶನಿವಾರ ಮಧ್ಯಾಹ್ನ ನಗ್ರಿಯಿಂದ ಮಂಚಿಯತ್ತ ತಮ್ಮ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೊಳ್ಳಾಯಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ಗಾಯಗೊಂಡ ಕೃಷ್ಣಪ್ಪ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಕೆಲ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಲೇಜಿನಿಂದ ಕ್ರೀಡಾ ಪರಿಕರ ಕಳವು
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಕೊಠಡಿಯಿಂದ ರು. ಮೂರುವರೆ ಸಾವಿರ ಮೌಲ್ಯದ ಕ್ರೀಡಾ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಕಾಲೇಜಿನಲ್ಲಿ ತರಗತಿಗಳಿಗೆ ರಜೆ ಇದ್ದ ಸಮಯದಲ್ಲಿ ಈ ಕೃತ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುಖೇಶ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಲಾಗಿದೆ.
ಅಪರಿಚಿತ ವ್ಯಕ್ತಿ ಸಾವು
ಮಂಗಳೂರು: ಬೊಂದೆಲ್ ಜಂಕ್ಷನ್ನಲ್ಲಿ ಅಸ್ವಸ್ಥಗೊಂಡಿದ್ದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿರುತ್ತಾರೆ. 5.3 ಅಡಿ ಎತ್ತರವಿದ್ದು, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದಾರೆ. ನಸು ನೀಲಿ ಟೀಶರ್ಟ್ ಧರಿಸಿರುತ್ತಾರೆ. ಸಂಬಂಧಪಟ್ಟ ವಾರೀಸುದಾರರು ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅಪರಿಚಿತ ಸಾವು
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷ ಪ್ರಾಯದ ವ್ಯಕ್ತಿ ಶನಿವಾರ ಮೃತಪಟ್ಟಿದ್ದಾರೆ. ಗುರುವಾರ ಬೋಂದೇಲ್ನಲ್ಲಿ ಪ್ರಜ್ಞಾಶೂನ್ಯ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವೆನ್ಲಾಕ್ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.