ಚುಟುಕು ಆಹ್ವಾನ
ಮಂಗಳೂರು: ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಮತ್ತು ರಾಜ್ಯಮಟ್ಟದ ಕವಿಗೋಷ್ಠಿಗೆ ಚುಟುಕುಗಳನ್ನು ಆಹ್ವಾನಿಸಲಾಗಿದೆ. ನ. 23 ರಂದು ಜಿಲ್ಲಾಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ ಮತ್ತು ನ. 24 ರಂದು ರಾಜ್ಯಮಟ್ಟದ ಚುಟುಕು ಕವಿಗೋಷ್ಠಿಯು ನಗರದ ಶ್ರೀ ಮಂಗಳಾದೇವಿ ಕಲಾಮಂಟಪದಲ್ಲಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ಸ್ವರಚಿತ ನಾಲ್ಕು ಸಾಲಿನ ಮೂರು ಚುಟುಕುಗಳನ್ನು ಬರೆದು ಕಳುಹಿಸಬಹುದು. ನ. 5 ಕೊನೆ ದಿನ. ಇರಾಶ್ರೀ ನೇಮು ಪೂಜಾರಿ, ಜಿಲ್ಲಾಧ್ಯಕ್ಷರು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಇರಾ ಅಂಚೆ, ಬಂಟ್ವಾಳ ತಾಲೂಕು ಇಲ್ಲಿಗೆ ಕಳುಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿಗೆ ಹಲ್ಲೆ: ದೂರು
ಬಂಟ್ವಾಳ: ಪೂರ್ವದ್ವೇಷದಲ್ಲಿ ಯುವಕನೋರ್ವ ವ್ಯಕ್ತಿಗೆ ಸಲಾಕೆಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಾಂಬಾಡಿ ನಿವಾಸಿ ಬಟ್ಯ ಎಂಬವರ ಪುತ್ರ ಬಾಬು (35) ಹಲ್ಲೆಗೊಳಗಾದವರು. ಅದೇ ಊರಿನ ನವೀನ್ ಎಂಬಾತ ಅಡಕೆ ಮರದ ಸಲಾಕೆಯಲ್ಲಿ ಹೊಡೆದು ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗೊಳಿಸಿದ್ದಾನೆ ಎಂದು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕೆರೆಯಲ್ಲಿ ಶವ ಪತ್ತೆ
ಬಂಟ್ವಾಳ: ವೃದ್ಧರೊಬ್ಬರ ಶವ ಅಳಿಕೆ ಗ್ರಾಮದ ವೆಂಕಟಕೃಷ್ಣ ಭಟ್ ಎಂಬವರ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಪಡಿಬಾಗಿಲು ನಿವಾಸಿ ಐತ್ತಪ್ಪ ಗೌಡ (67) ಎಂದು ಗುರುತಿಸಲಾಗಿದೆ. ಕಳೆದ ಹಲವಾರು ಸಮಯದಿಂದ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಳಿ ಅಂಕ: ನಾಲ್ವರ ಸೆರೆ
ಬಂಟ್ವಾಳ: ವಿಟ್ಲಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಆರು ಕೋಳಿ ಹಾಗೂ ರು. 950 ನಗದು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

