ಗೋ ಅಕ್ರಮ ಸಾಗಾಟ; ನಾಲ್ವರ ಬಂಧನ
ಬೆಳ್ತಂಗಡಿ: ಪಿಕಪ್ವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಬೆಳ್ತಂಗಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾಜೂರು ನಿವಾಸಿಗಳಾದ ಫಾರೂಕ್ ಜಮಲುದ್ದೀನ್ (24), ಉಮ್ಮರ್ ಫಾರುಕ್ (19), ಅಬ್ದುಲ್ ಖಲಂ (21), ಪಾದೆಗುತ್ತು ನಿವಾಸಿ ಶಾಕೀರ್ ಬಂಧಿತರು. ಸೋಮವಾರ ಮಧ್ಯಾಹ್ನ ಪಿಕಪ್ವೊಂದರಲ್ಲಿ ಸೂಕ್ತ ದಾಖಲೆಗಳಿಲ್ಲದೆ ಎರಡು ಜಾನುವಾರುಗಳನ್ನು ದಿಡುಪೆಯಿಂದ ಮುಂಡಾಜೆಯತ್ತ ಸಾಗಿಸಲಾಗುತ್ತಿತ್ತು. ಊರವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಒಂದು ಎತ್ತು, ಒಂದು ಎಮ್ಮೆ, ಪಿಕಪ್ ಸೇರಿದಂತೆ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

