ದಕ್ಷಿಣ ಕನ್ನಡ

ಕಾನತ್ತೂರಲ್ಲಿ ಸತ್ಯ ಪ್ರಮಾಣಕ್ಕೆ ಸಿದ್ಧ

Published On :

ಪುತ್ತೂರು: ಪಾಣಾಜೆ ನಿಡ್ಪಳ್ಳಿ ಗ್ರಾಮದ ಕಾಳುಮೆಣಸು ಬೆಳೆಗಾರರ ಸಂಘದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ತಮ್ಮಲ್ಲಿ ಸಾಕ್ಷಿ ಆಧಾರಗಳಿದ್ದು, ಈ ಬಗ್ಗೆ ಸಂಘದ ಅಧ್ಯಕ್ಷರ ಹೇಳಿಕೆಯಂತೆ ತಾವು ಕಾರಣಿಕ ಕ್ಷೇತ್ರವಾದ ಕಾನತ್ತೂರಿನಲ್ಲಿ ಸತ್ಯ ಪ್ರಮಾಣ ಮಾಡಲು ಸಿದ್ಧರಿದ್ದೇವೆ ಎಂದು ಎಂದು ಸ್ಥಳೀಯರಾದ ಪ್ರವೀಣ್ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
   ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಅವ್ಯವಹಾರ ನಡೆಸಿರುವ ಬಗ್ಗೆ ತಾನು ಈ ಹಿಂದೆ ಆರೋಪಿಸಿದ್ದೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅಧ್ಯಕ್ಷರು ತಮ್ಮನ್ನು ಕಾನತ್ತೂರಿಗೆ ಆಗಮಿಸಿ ಸತ್ಯ ಪ್ರಮಾಣ ಮಾಡುವಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಇದೀಗ ನಾವು ಅವರ ಆಹ್ವಾನದಂತೆ ಪ್ರಮಾಣಕ್ಕೆ ಸಿದ್ಧರಿದ್ದೇವೆ ಎಂದರು.
  ಸುದ್ದಿಗೋಷ್ಠಿಯಲ್ಲಿ ಸ್ಥಳೀಯರಾದ ಮಹಮ್ಮದ್ ಕಂಚಿಲ್ಕುಂಜ, ಜಗನ್ಮೋಹನ ರೈ ಮತ್ತು ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.