ವಿದ್ಯುತ್ ಆಘಾತ; ಮೃತ ವಿದ್ಯಾರ್ಥಿ ಕುಟುಂಬಕ್ಕೆ ಪರಿಹಾರ- ಸಚಿವ ಜೈನ್
ಮಣಿಪಾಲ: ಶೃಂಗೇರಿಯ ಹೊಳೆಕೊಪ್ಪದಲ್ಲಿ ನಡೆದ ಪೈಕಾ ದಸರಾ ಗ್ರಾಮೀಣ ಕ್ರೀಡಾಕೂಟದ ಸಂದರ್ಭದಲ್ಲಿ ವಿದ್ಯುತ್ ಅಘಾತದಿಂದ ಮೃತಪಟ್ಟ ಶಾಲಾ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಮತ್ತು 3 ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ.
ಅವರು ಮಂಗಳವಾರ ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಳೆಕೊಪ್ಪದ ಸರ್ಕಾರಿ ಶಾಲೆಯ ಮೈದಾನದಲ್ಲಿ ನಡೆದ ಈ ಕ್ರೀಡಾಕೂಟದ ಸಂದರ್ಭದಲ್ಲಿ ವಾಲಿ ನಿಂತಿದ್ದ ಧ್ವಜಸ್ತಂಭವನ್ನು ಸರಿಪಡಿಸುವಾಗ ಕಂಬಕ್ಕೆ ಹೈಟೆನ್ಷನ್ ತಂತಿ ತಗುಲಿ ಕಾರ್ತಿಕ್ (16) ಎಂಬ ವಿದ್ಯಾರ್ಥಿ ಗಾಯಗೊಂಡು ಶಂೃಗೇರಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತನನ್ನು ರಕ್ಷಿಸಲು ಹೋದ ರಂಜನ್ (16) ಹಾಗೂ ಶ್ರೀರಾಮ ಸೇನೆಯ ಕಾರ್ಯಕರ್ತ ಅನಿಲ್ (33) ಎಂಬವರಿಗೂ ಗಾಯಗಳಾಗಿವೆ. ಈ ಘಟನೆಯನ್ನು ನೋಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಮೂರ್ತಿ ಅವರಿಗೆ ಹೃದಯಘಾತವಾಗಿದ್ದು ತಕ್ಷಣ ಗಾಯಾಳುಗಳನ್ನು ಮತ್ತು ಶಿಕ್ಷಕರನ್ನು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಶವಮೂರ್ತಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ರಂಜನ್ ಹಾಗೂ ಅನಿಲ್ ಅವರ ಪರಿಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಭೇಟಿ ಮಾಡಿದ ಸಚಿವ ಜೈನ್, ಕುಟುಂಬದವರಿಗೆ ಸಾಂತ್ವನ ಹೇಳಿ ಆಸ್ಪತ್ರೆಯ ಖರ್ಚುಗಳನ್ನು ಸರ್ಕಾರ ಭರಿಸುವುದಾಗಿ ಭರವಸೆ ನೀಡಿದರು.
ಅಲ್ಲದೆ ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳ ಹತ್ತಿರದಲ್ಲಿರುವ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ತಕ್ಷಣ ತೆರವುಗೊಳಿಸುವುದಕ್ಕೆ ಶಿಕ್ಷಣ ಸಚಿವ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಘಟನೆ ನಡೆದ ಹೊಳೆಕೊಪ್ಪ ಶಾಲೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

