ದಕ್ಷಿಣ ಕನ್ನಡ

ವಿದ್ಯಾರ್ಥಿನಿಗೆ ವಂಚನೆ; ನಿರ್ವಾಹಕನಿಗೆ ನ್ಯಾಯಾಂಗ ಬಂಧನ

Published On :

ಕ.ಪ್ರ.ವಾರ್ತೆ ಸುಬ್ರಹ್ಮಣ್ಯ ಸೆ. 3
ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಬಸ್ ನಿರ್ವಾಹಕನನ್ನು ಸುಳ್ಯ ಪೊಲೀಸರು ಮಂಗಳವಾರ ವಶಕ್ಕೆ ತೆಗೆದುಕೊಂಡು ಸುಳ್ಯ ವೃತ್ತ ನಿರೀಕ್ಷಕರ ಮುಂದೆ ಹಾಜರು ಪಡಿಸಿದರು.
ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ನಾಗೇಶನನ್ನು ಹಾಸನ ಜಿಲ್ಲೆಯ ಗೋರೂರು ಸಮೀಪದ ಚೌಡುಹಳ್ಳಿಯಿಂದ ಮಂಗಳವಾರ ವಶಕ್ಕೆ ತೆಗೆದುಕೊಂಡರು. ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡ ಮೇರೆಗೆ ದಸ್ತಗಿರಿ ಮಾಡಿ ಮಂಗಳೂರು ಪ್ರಿನ್ಸಿಪಲ್ ಸೆಷನ್ಸ್ ಕೋರ್ಟ್ ಮುಂದೆ ಹಾಜರು ಪಡಿಸಿದಾಗ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸುಬ್ರಹ್ಮಣದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ನಿತ್ಯ ಸುಳ್ಯ- ಸುಬ್ರಹ್ಮಣ್ಯ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಸಂಚರಿಸುತ್ತಿದ್ದಳು. ಈಕೆ ಬಸ್ ನಿರ್ವಾಹಕ ನಾಗೇಶನ ಪ್ರೇಮ ಬಲೆಗೆ ಬಿದ್ದಿದ್ದು, ಆತ ಆಕೆಯನ್ನು ಪುಸಲಾಯಿಸಿ ಶುಕ್ರವಾರ ಬೆಂಗಳೂರಿಗೆ ಕರೆದೊಯ್ದಿದ್ದ.
ಭಾನುವಾರ ಸಂಜೆ ಆಕೆ ಮನೆಗೆ ವಾಪಸ್ ಬಂದಾಗ ಮನೆಯವರು ಎರಡು ದಿನ ಎಲ್ಲಿಗೆ ಹೋಗಿದ್ದೆ ಎಂದು ವಿಚಾರಿಸಿದಾಗ ವಿಷಯ ಬಹಿರಂಗಪಡಿಸಿದ್ದಾಳೆ. ಬಳಿಕ ಈ ಸಂಬಂಧವಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ವಿದ್ಯಾರ್ಥಿನಿಯನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.