ದಕ್ಷಿಣ ಕನ್ನಡ

ಬಾಣಂತಿ ಸಾವು: ದೂರು ದಾಖಲು

Published On :

ಮಂಗಳೂರು: ಹೆರಿಗೆಗೆ ಎಂದು ದಾಖಲಾಗಿದ್ದ ವಾಮದಪದವು ನಿವಾಸಿ ವಿಶಾಲ(27) ಲೇಡಿಗೋಷನ್ ಆಸ್ಪತ್ರೆಯಲ್ಲಿ ದಿಢೀರ್ ಮೃತಪಟ್ಟಿದ್ದಾರೆ. ಮಗು ಹುಟ್ಟಿದ ಎರಡೇ ದಿನದಲ್ಲಿ ತಾಯಿ ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದ್ದು ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಿಶಾಲ ಕಳೆದ ವರ್ಷ ಡಿ.4ರಂದು ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ರವಿ ಎಂಬವರನ್ನು ವಿವಾಹವಾಗಿದ್ದರು. ಆ.31ರಂದು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಿಸಿದ್ದು, ಸೆ.2ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಗ ಇಬ್ಬರ ಆರೋಗ್ಯ ಸರಿಯಾಗಿಯೇ ಇತ್ತು. ಬಳಿಕ ತಾಯಿ ಆರೋಗ್ಯ ಹದಗೆಡುತ್ತಾ ಹೋಯಿತು. ಕೆಎಂಸಿ ಆಸ್ಪತ್ರೆಗೆ ವಿಶಾಲಳನ್ನು ರವಾನಿಸಿದ್ದು,  ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟರು. ಮೂತ್ರ ಪಿಂಡಗಳ ವೈಫಲ್ಯ ಮತ್ತು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ವರದಿ ನೀಡಿದ್ದಾರೆ. ಇದೀಗ ತಾಯಿಯನ್ನು ಕಳೆದುಕೊಂಡು ಮಗು ಅನಾಥವಾಗಿದೆ. ತಂದೆ ವಿದೇಶದಿಂದ ಇನ್ನಷ್ಟೇ ಬರಬೇಕಾಗಿದೆ. ವಿಶಾಲ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ವಿರುದ್ಧ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.