ದಕ್ಷಿಣ ಕನ್ನಡ

ಕೊಳೆ ರೋಗ; ರು. 25 ಕೋಟಿ ಮಂಜೂರು-ಬಂಗೇರ

Published On :

ಬೆಳ್ತಂಗಡಿ: ಕೊಳೆ ರೋಗದಿಂದ ಸಂಕಷ್ಟಪಡುತ್ತಿರುವ ಬೆಳೆಗಾರರ ಸಮಸ್ಯೆಗಳಿಗೆ  ರಾಜ್ಯ ಸರ್ಕಾರ ಸ್ಪಂದಿಸಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಗಳಿಗೆ ರು. 25 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಕೆ.ವಸಂತ ಬಂಗೇರ ಪ್ರಕಟಿಸಿದ್ದಾರೆ.
ಗುರುವಾಯನಕೆರೆ ಜೈನ್‌ಪೇಟೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಬುಧವಾರ ನಡೆದ ಚಿಂತನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
5 ವರ್ಷದಲ್ಲಿ ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಯಾಗಬೇಕು ಎಂಬ ಗುರಿಯೊಂದಿಗೆ ಈ ಚಿಂತನಾ ಸಮಾವೇಶ ನಡೆಸಲಾಗುತ್ತಿದ್ದು, ಈ ವರ್ಷ ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ 2 ಕಾಮಗಾರಿ ಮಂಜೂರುಗೊಳಿಸುವುದಾಗಿ ಶಾಸಕರು ಆಶ್ವಾಸನೆ ನೀಡಿದರು.
ಮುಂದಿನ 5 ವರ್ಷದಲ್ಲಿ ತಾಲೂಕಿನ ಎಲ್ಲ 81 ಗ್ರಾಮಗಳು ಪ್ರಜ್ವಲಿಸಬೇಕು. ಬೇರೆ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಕಡಿಮೆ ಗ್ರಾಮಗಳಿವೆ. ಆದರೆ ಬೆಳ್ತಂಗಡಿ ಕ್ಷೇತ್ರದಲ್ಲಿ 81 ಗ್ರಾಮಗಳಿರುವುದರಿಂದ ಇತರ ಕ್ಷೇತ್ರಗಳಿಗೆ ನೀಡಿದ ಪ್ರಮಾಣದ ಅನುದಾನವನ್ನು ಬೆಳ್ತಂಗಡಿಗೆ ನೀಡಿದರೆ ಸಾಕಾಗುವುದಿಲ್ಲ ಎಂಬ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಿದ್ದೇನೆ. ಈ ಬಾರಿ ಮಳೆಯಿಂದಾಗಿ ತಾಲೂಕಿನಲ್ಲಿ ಅತ್ಯಂತ ಹೆಚ್ಚು ನಷ್ಟ ಉಂಟಾಗಿದ್ದು, ರು. 2.50 ಕೋಟಿ ಮಂಜೂರು ಮಾಡುವಂತೆ ವಿನಂತಿ ಮಾಡಿರುವುದಾಗಿ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿ ಕೆಲಸ ಮಾಡಬೇಕು ಎಂದರು.
ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಧರ್ಮಗುರು ಫಾ. ಜೇಮ್ಸ್ ಡಿಸೋಜ, ತಾಲೂಕು ಪಂಚಾಯಿತಿ ಅಧ್ಯಕ್ಷ ಕೇಶವ, ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಮದ್ರ ಗೌಡ, ಬಿಜೆಪಿ ತಾಲೂಕು ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸವಣಾಲು, ಜೆಡಿಎಸ್ ತಾಲೂಕು ಅಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ,  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿತಾಂಬರ ಹೇರಾಜೆ, ಬೆಳ್ತಂಗಡಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಳಸಿ ಹಾರಬೆ, ದೇವಕಿ, ಶೈಲೇಶ್ ಕುಮಾರ್, ಧನಲಕ್ಷ್ಮೀ, ಸಿ.ಕೆ. ಚಂದ್ರಕಲಾ, ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಸಾಹುಲ್ ಹಮೀದ್, ತಾಲೂಕು ಪಂಚಾಯಿತಿ ಸದಸ್ಯರಾದ ಮಮತಾ ಶೆಟ್ಟಿ, ಮಂಜುನಾಥ್ ಸಾಲ್ಯಾನ್, ಹೇಮಾವತಿ, ಜಯಂತಿ ಪಾಲೇದು, ಸರೋಜಿನಿ, ಕುಸುಮ ಬಂಗೇರ, ವಿನ್ಸೆಂಟ್ ಡಿಸೋಜ, ಧರ್ಣಪ್ಪ ಪೂಜಾರಿ, ವಿಜಯ ಗೌಡ ಮತ್ತಿತರರು ಇದ್ದರು.
ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್. ನರೇಂದ್ರ ಸ್ವಾಗತಿಸಿದರು. ತಾಲೂಕು ಸಂಯೋಜಕ ಜಯಾನಂದ ಲಾಯಿಲ ನಿರೂಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.