15ರಂದು ಕರೋಕೆ ಗಾಯನ ಸ್ಪರ್ಧೆ
ಮೂಲ್ಕಿ: ಕಿನ್ನಿಗೋಳಿ ಜನನಿ ಮೆಲೋಡಿಸ್ನ ಆಶ್ರಯದಲ್ಲಿ ಕರಾವಳಿಯ ಯುವ ಗಾಯಕ- ಗಾಯಕಿಯರಿಗಾಗಿ ಎದೆ ತುಂಬಿ ಹಾಡುವೆನು ಕರಾವಳಿ ಸೂಪರ್ ಸಿಂಗರ್- 2013 ಕರೋಕೆ ಗಾಯನ ಸ್ಪರ್ಧೆಯು ಕಿನ್ನಿಗೋಳಿಯ ಯುಗಪುರುಷದ ಸಭಾಭವನದಲ್ಲಿ 15 ರಂದು ಜರಗಲಿದೆ. ಜ್ಯೂನಿಯರ್ ವಿಭಾಗದಲ್ಲಿ 6ರಿಂದ 12 ಹಾಗೂ 12 ರಿಂದ 20 ವರ್ಷದ ಹಾಗೂ ಸೀನಿಯರ್ ವಿಭಾಗದಲ್ಲಿ 20ರಿಂದ 32 ಮತ್ತು 32ಕ್ಕೆ ಮೇಲ್ಪಟ್ಟು ವಯೋವಾನದವರಿಗಾಗಿ ಸ್ಪರ್ಧೆ ನಡೆಯಲಿದೆ. 29ರಂದು ಜರಗಲಿರುವ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಿದ್ದು, ಕಾರ್ಯಕ್ರಮದಲ್ಲಿ ಸಮಾಜ ಸೇವಕ ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ, ನೃತ್ಯ ನಿರ್ದೇಶಕ ಸೂರಜ್ ಶೆಟ್ಟಿ ಮತ್ತು ಶರತ್ ಕುಮಾರ್ ಹಳೆಯಂಗಡಿಯವರನ್ನು ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಾಳೆಯಿಂದ ಬಾಲ್ಬ್ಯಾಡ್ಮಿಂಟನ್ ಕ್ರೀಡಾಕೂಟ
ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ 14ರಿಂದ 15ರವರೆಗೆ ಕಟೀಲು ದೇವಳ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಾಲಕ- ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

