ದಕ್ಷಿಣ ಕನ್ನಡ

ಕರಾವಳಿ ಮಾಲಿನ್ಯ ತಡೆಯಲು ತರಬೇತಿ

Published On :

ಮಂಗಳೂರು: ರಾಜ್ಯದ ಕರಾವಳಿ ತೀರ ಪ್ರದೇಶ ಮಾಲಿನ್ಯವಾಗದಂತೆ ತಡೆಯಲು ಕರಾವಳಿ ನಿಯಂತ್ರಣ ವಲಯ ವತಿಯಿಂದ ತರಬೇತಿಯನ್ನು ದ.ಕ., ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಮಹಾನಿರ್ದೇಶಕ ಕೆ.ಎಚ್.ವಿನಯಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 'ಕರಾವಳಿ ನಿಯಂತ್ರಣ ವಲಯ ತರಬೇತಿ' ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ಸಂಸ್ಥೆ ಪರಿಸರ ನಿರ್ವಹಣೆಗೆ ಹಾಗೂ ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ತರಬೇತಿ ನೀಡುವ ಮೂಲಕ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಮಾಡುತ್ತಿದೆ ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳ ಪರಿಸರ ಸಂರಕ್ಷಣೆ, ಜೈವಿಕ ವೈದ್ಯಕೀಯ, ತ್ಯಾಜ್ಯ ನಿರ್ವಹಣೆ ಹಾಗೂ ಕರಾವಳಿ ನಿಯಂತ್ರಣ ವಲಯ ವಿಷಯಗಳ ಕುರಿತು ಅಧಿಕಾರಿಗಳಿಗೆ, ಸಿಬ್ಬಂದಿ, ವೈದ್ಯಕೀಯ ಕ್ಷೇತ್ರ, ಶುಶ್ರೂಷಕಿಯರು, ಪ್ರಯೋಗಾಲಯ ತಜ್ಞರಿಗೆ, ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿಯ ನೀಡಲಾಗುತ್ತಿದೆ ಎಂದರು.
ಸಾವಿರ ವರ್ಷಗಳಿಂದ ಪ್ರಾಣಿ ಸಂಕುಲವನ್ನು ಪೋಷಿಸುತ್ತಿರುವ ಪರಿಸರವನ್ನು ನಾವು ಮುಂದಿನ ಪೀಳಿಗೆಗಾಗಿ ಕಾದಿರಿಸಲು ಸಂರಕ್ಷಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ದಯಾನಂದ ಹೇಳಿದ್ದಾರೆ. ತರಬೇತಿ ಮುಖ್ಯಸ್ಥ ಬಿ. ಬಸವರಾಜು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.