ದಕ್ಷಿಣ ಕನ್ನಡ

ರಾಜ್ಯದಲ್ಲಿ ಬ್ಲಡ್ ಬ್ಯಾಂಕ್ ಜಾಲ: ಖಾದರ್

Published On :

ಮಂಗಳೂರು: ತುರ್ತು ಸಂದರ್ಭದಲ್ಲಿ ರಕ್ತ ಲಭ್ಯವಾಗಲು ರಾಜ್ಯದಲ್ಲಿ ಬ್ಲಡ್ ಬ್ಯಾಂಕ್ ಜಾಲ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
 ಉತ್ತರ ಕರ್ನಾಟಕ ಪ್ರದೇಶದಲ್ಲಿ ರಕ್ತದಾನ ಜಾಗೃತಿ ಆಗಿಲ್ಲ. ಈ ಭಾಗದಲ್ಲಿ ರಕ್ತ ಸಂಗ್ರಹ ಬೇಕಾದಷ್ಟಿದೆ. ಆದರೆ ರಾಯಚೂರು ಮೊದಲಾದ ಪ್ರದೇಶಗಳಲ್ಲಿ ತುರ್ತು ಸಂದರ್ಭದಲ್ಲಿ ರಕ್ತ ಸಿಗುವುದೇ ಕಷ್ಟವಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಎಲ್ಲೆಡೆ ರಕ್ತ ಸಿಗುವಂತಾಗಲು ಬ್ಲಡ್ ಬ್ಯಾಂಕ್ ಸ್ಥಾಪಿಸಲಾಗುವುದು ಎಂದರು.
 ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಹೃದ್ರೋಗ, ಕ್ಯಾನ್ಸರ್, ಮೂತ್ರಪಿಂಡ ಮೊದಲಾ ಮಾರಣಾಂತಿಕ ಕಾಯಿಲೆ ಮತ್ತು ನವಜಾತ ಶಿಶುಗಳ ರೋಗಗಳಿಂದ ನರಳುವ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮತ್ತು ಆರೈಕೆ ಸೌಲಭ್ಯ ನೀಡಲಾಗುತ್ತಿದೆ. 5 ಜನರು ಇರುವ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 1.5 ಲಕ್ಷ ವರೆಗೆ ಚಿಕಿತ್ಸೆ ವೆಚ್ಚ ದೊರೆಯಲಿದೆ. ಅಗತ್ಯ ಇದ್ದರೆ ಹೆಚ್ಚುವರಿ 50 ಸಾವಿರ ಚಿಕಿತ್ಸಾ ವೆಚ್ಚ ಭರಿಸಲಾಗುವುದು.
 ರಾಜ್ಯದಲ್ಲಿ 36,631 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದಾರೆ. 190.24 ಕೋಟಿ ಖರ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ 1,140 ಮಂದಿ ಪ್ರಯೋಜನ ಪಡೆದಿದ್ದಾರೆ. ಯೋಜನೆಯಲ್ಲಿ ನಗರದ 10 ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳು ಹೆಸರು ನೋಂದಾಯಿಸಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯಕಾರಿ ನಿರ್ದೇಶಕರಾದ ಡಾ.ಪಿ.ಬೋರೇಗೌಡ, ಡಾ.ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.