ಧರ್ಮಕಾರ್ಯಗಳಿಂದ ಸಾರ್ಥಕತೆ: ಸ್ವಾಮೀಜಿ
ಬೆಳ್ತಂಗಡಿ: ಧರ್ಮೋನ್ನತಿಯ ಕಾರ್ಯಗಳು ನಡೆಯುತ್ತಿದ್ದರೆ ಜೀವನದಲ್ಲಿ ಸಾರ್ಥಕತೆ ಸಾಧ್ಯ ಎಂದು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.
ಶನಿವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ಷಷ್ಠ್ಯಬ್ಧ ಅಭಿನಂದನೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಇನ್ನೂ ಹದಿನೇಳೂವರೆ ಸಾವಿರ ವರ್ಷಗಳನ್ನು ಕಳೆಯಬೇಕಾದ ಕಾರಣ ಪ್ರಳಯ ಭೀತಿ ಅನಗತ್ಯ ಎಂದ ಶ್ರೀಗಳು, ಧರ್ಮದ ಸರಿಯಾದ ಅನುಷ್ಠಾನದಿಂದ ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯವಿದೆ. ಅದಕ್ಕಾಗಿ ಧರ್ಮ ಪ್ರೇರಕ ಕಾರ್ಯಗಳು ಸದಾ ನಡೆಯುತ್ತಿರಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಕ್ಷೇತ್ರದ ಕಾರ್ಯ ಚಟುವಟಿಕೆಗಳಲ್ಲಿ ಹರ್ಷೇಂದ್ರ ಕುಮಾರ್ ಕಾರ್ಯದಕ್ಷತೆ ಪ್ರಮುಖವಾದುದು ಎಂದರು.
ಯುವಜನ ಸೇವಾ ಖಾತೆ ಸಚಿವ ಕೆ. ಅಭಯಚಂದ್ರ ಜೈನ್ ಅಭಿನಂದನಾ ಗ್ರಂಥ 'ವಜ್ರಕುಸುಮ' ಬಿಡುಗಡೆಗೊಳಿಸಿದರು. ಶಾಸಕ ಕೆ. ವಸಂತ ಬಂಗೇರ ಮುಖ್ಯ ಅತಿಥಿಯಾಗಿದ್ದರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದನಾ ಭಾಷಣ ಮಾಡಿದರು.
'ಕಾಯಕ ಯೋಗಿ' ಬಿರುದು: ಅಭಿನಂದನಾ ಸಮಿತಿ ವತಿಯಿಂದ ಹರ್ಷೇಂದ್ರ ಕುಮಾರ್ ದಂಪತಿಯನ್ನು ಕಾಯಕಯೋಗಿ ಬಿರುದು ನೀಡಿ ಸಮ್ಮಾನಿಸಲಾಯಿತು. ಹೊಂಬುಜ ಶ್ರೀಗಳು ಹಾಗೂ ಹರ್ಷೇಂದ್ರರ ಅಭಿಮಾನಿಗಳು ಹಾರಾರ್ಪಣೆ ಮಾಡಿದರು.
ಹೇಮಾವತಿ ವಿ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ರಾಜೇಂದ್ರ ಕುಮಾರ್, ಡಾ. ನಿರಂಜನ್, ಪದ್ಮಲತಾ ನಿರಂಜನ್, ಅಮಿತ್, ಶ್ರೇಯಸ್ ಕುಮಾರ್ ಇದ್ದರು. ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಾ.ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ರಾಮಚಂದ್ರ ರಾವ್ ನಿರೂಪಿಸಿದರು. ವಿವಿಧ ಆಕರ್ಷಣೆಗಳೊಂದಿಗೆ ವೈಭವದ ಮೆರವಣಿಗೆ ನಡೆಯಿತು. ಸಾಂಸ್ಕೃತಿಕ ಕಾರ್ಯತ್ಕಮ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

