ದಕ್ಷಿಣ ಕನ್ನಡ

ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್‌ಪ್ರಥಮ

Published On :

ಮೂಲ್ಕಿ: ಕಟೀಲು ದೇವಳ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಅಂಗವಾಗಿ ಕಟೀಲು ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಬಾಲಕ, ಬಾಲಕಿಯರ ಸಬ್ ಜ್ಯೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದಿದೆ.
ತುಮಕೂರಿನ ಹೊನ್ನುಡಿಕೆ ಸ್ವರ್ಣಾಂಭ ಪ್ರೌಢಶಾಲೆಯು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಹಾಗೂ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿವೆ. ಬಾಲಕರ ವಿಭಾಗದಲ್ಲಿ ಜಯ ಸ್ಪೋರ್ಟ್ಸ್ ಬೆಂಗಳೂರು ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಪಾಂಡವಪುರ ಶಾಲೆಯು ತೃತೀಯ ಸ್ಥಾನ ಪಡೆದುಕೊಂಡಿವೆ.
ರಾಷ್ಟ್ರ ಮಟ್ಟಕ್ಕೆ ಆಯ್ಕೆ: ಆಳ್ವಾಸ್‌ನ ನಿಶಾಂತ್ ಮತ್ತು ಲಾವಣ್ಯ ವೈಯಕ್ತಿಕ ಪ್ರಶಸ್ತಿ ಪಡೆದರು. ಬಾಲಕರ ವಿಭಾಗದಲ್ಲಿ ಹರ್ಷಿತ್ ಮತ್ತು ಕಾರ್ತಿಕ್ ಕಟೀಲು ಶಾಲೆ, ಪವನ್ ತುಮಕೂರು, ಶರತ್ ಮತ್ತು ಪ್ವಜ್ವಲ್ ಪಾಂಡವಪುರ ಹಾಗೂ ಬಾಲಕಿಯರ ವಿಭಾಗದಲ್ಲಿ ಕೋಟ ಮೂಡುಗಿಳಿಯಾರು ಶಾಲೆಯ  ಚಿತ್ರ, ಸುರೇಖ, ಆಳ್ವಾಸ್‌ನ ಕಾವ್ಯ, ತುಮಕೂರಿನ ಹೊನ್ನುಡಿಕೆ ಶಾಲೆಯ ಕಾವ್ಯ ಮತ್ತು ಜಯ ಸ್ಪೋರ್ಟ್ಸ್ ಬೆಂಗಳೂರಿನ ಪಲ್ಲವಿ ರಾಷ್ಟ್ರ ಮಟ್ಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಟ್ರೋಫಿ ವಿತರಣೆ: ಸಮಾರೋಪ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಮೊಕ್ತೇಸರ ಕೆ. ವಾಸುದೇವ ಆಸ್ರಣ್ಣ ವಿಜೇತರಿಗೆ ಟ್ರೋಫಿ ವಿತರಿಸಿದರು.
ಸಮಾರೋಪ ಸಮಾರಂಭದಲ್ಲಿ ಕಟೀಲು ಪ್ರೌಢಶಾಲೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಹರಿನಾರಾಯಣದಾಸ ಆಸ್ರಣ್ಣ, ಕಟೀಲು ಪದವಿಪೂರ್ವ ಕಾಲೇಜಿನ ಉಪಪ್ರಾಚಾರ್ಯ ಸುರೇಶ್ ಭಟ್, ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ರಾಜ್ಯ ಬಾಲ್ ಬ್ಯಾಡ್ಮಿಂಟನ್ ಎಸೋಸಿಯೇಶನ್ ಕಾರ್ಯದರ್ಶಿ ದಿನೇಶ್, ರಾಜಾರಾಮ್ ಇದ್ದರು. ಒಟ್ಟು 45 ತಂಡಗಳು ಪಂದ್ಯದಲ್ಲಿ ಭಾಗವಹಿಸಿದ್ದವು. ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಳ, ದೇವಳದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗ ಮತ್ತು ದ.ಕ. ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಎಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.