ಅಪಘಾತ: ಮೂವರಿಗೆ ಗಾಯ
ಕೊಲ್ಲೂರು: ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಗಾಯಗೊಂಡು ಘಟನೆ ಇಲ್ಲಿನ ಹಾಲ್ಕಲ್ ಜಂಕ್ಷನ್ ಬಳಿ ಭಾನುವಾರ ನಡೆದಿದೆ. ಗಾಯಗೊಂಡವರನ್ನು ಸುರತ್ಕಲ್ನ ಕೆ. ನಾರಾಯಣ ಪೊದುವಾಳ್, ಆರ್. ರಮಣಿ, ಸಜಿನ್ ಎಂದು ಗುರುತಿಸಲಾಗಿದೆ. ಇವರು ಭಾನುವಾರ ಕಾರಿನಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವರ ದರ್ಶನಕ್ಕೆ ಹೋಗುತ್ತಿರುವಾಗ ಹಾಲ್ಕಲ್ ಜಂಕ್ಷನ್ ಎಂಬಲ್ಲಿ ಕೊಲ್ಲೂರು ಕಡೆಯಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಕಾರು ರಸ್ತೆಯ ಎಡ ಬದಿಗೆ ಚಲಿಸಿ ಸುಮಾರು 15 ರಿಂದ 20 ಅಡಿ ಆಳಕ್ಕೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾರಯಣ, ರಮಣಿ ಹಾಗೂ ಸಚಿನ್ ಗೊಯಗೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಗುಪ್ಸೆ: ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ನಿವಾಸಿ ದಿ. ಕುಂಞ ನಲಿಕೆ ಪುತ್ರ ಸುಂದರ (43) ಜೀವನದಲ್ಲಿ ಜಿಗುಪ್ಸೆಗೊಂಡ ನೇಣಿಗೆ ಶರಣಾದ ಘಟನೆ ಸೋಮವಾರ ನಡೆದಿದೆ. ಸುಮಾರು ಒಂದು ತಿಂಗಳಿಂದ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಪಕ್ಕದಲ್ಲಿರುವ ಕೊಟ್ಟಿಗೆಯ ತೊಲೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ವಿವಾಹವಾಗಿದ್ದು ಒಂದು ಮಗುವನ್ನೂ ಹೊಂದಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದನದ ಮಾಂಸ ಸಾಗಾಟ: ಇಬ್ಬರ ಸೆರೆ
ಸುಬ್ರಹ್ಮಣ್ಯ: ನಾಲ್ಕೂರು ಗ್ರಾಮದ ಪಾಲ್ತಾಡಿ ಎಂಬಲ್ಲಿ ಜೀಪ್ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಸೋಮವಾರ ಮುಂಜಾನೆ ಬಂಧಿಸಿದ್ದಾರೆ. ವಳಲಂಬೆಯ ಸಜು ಹಾಗೂ ಜೀಪ್ ಚಾಲಕ ಗಿರೀಶ ನೂಜಿಬಾಳ್ತಿಲ ಬಂಧಿತ ಆರೋಪಿಗಳು. ಅವರನ್ನು ಸುಳ್ಯ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯ ಎಎಸ್ಐ ಕುಶಾಲಪ್ಪ, ಯೋಗೀಂದ್ರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ಲಾರಿ ಡಿಕ್ಕಿ: ಬಾಲಕ ಗಂಭೀರ
ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಶ್ರೀರಾಮ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ಸಂಜೆ ನಡೆದಿದೆ. ಹಿರೇಬಂಡಾಡಿ ಗ್ರಾಮದ ಕೋರಂಬಾಡಿ ನಿವಾಸಿ ಲಿಂಗಪ್ಪ ಗೌಡ ಎಂಬವರ ಪುತ್ರ, ಶ್ರೀರಾಮ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (7) ತೀವ್ರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಫಿಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

