ದಕ್ಷಿಣ ಕನ್ನಡ

ನೇತ್ರಾವತಿ ತಿರುವು ಯೋಜನೆ ಹೆಸರಲ್ಲಿ ನದಿ ಬರಡಾಗಿಸುವ ಯತ್ನ: ಡಾ.ಪ್ರಭಾಕರ ಭಟ್

Published On :

ಬಂಟ್ವಾಳ: ನೇತ್ರಾವತಿ ನದಿ ತಿರುವು ಯೋಜನೆಯ ಹೆಸರಿನಲ್ಲಿ ನಮ್ಮ ಪವಿತ್ರ ನದಿ ಬರಡಾಗಿಸುವ ಯತ್ನ ನಡೆಯುತ್ತಿದೆ. ಇಂತಹ ದೌರ್ಜನ್ಯಗಳನ್ನು ತಡೆಯಲು ಹಿಂದೂ ಸಮಾಜ ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದ್ದಾರೆ.
ಇತ್ತೀಚೆಗೆ ನರಿಕೊಂಬು, ಶಂಭೂರು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲಾ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 10ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ  ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ಶ್ರದ್ಧಾ ಕೇಂದ್ರ, ಗೋಮಾತೆ, ನಮ್ಮ ನೆಲ, ಜಲದ ಮೇಲೆ ನಿರಂತರ ಆಕ್ರಮಣಗಳಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಗೋವಿನ ದರೋಡೆ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ ಎಂದರು.
ಮಾಜಿ ಶಾಸಕ ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಉದ್ಯಮಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಭೂ ಬ್ಯಾಂಕ್ ಉಪಾಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿದರು. ತಾ.ಪಂ. ಉಪಾಧ್ಯಕ್ಷ ಆನಂದ ಎ. ಶಂಭೂರು, ಬಂಟ್ವಾಳ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಆನಂದ ಜಿ. ಬಂಟ್ವಾಳ, ಕೋದಂಡ ರಾಮ ಭಜನಾ ಮಂದಿರದ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ, ಉದ್ಯಮಿಗಳಾದ ಪದ್ಮನಾಭ ಮಯ್ಯ, ರಘು ಸಪಲ್ಯ, ಪುರಸಭೆ ಮಾಜಿ ಸದಸ್ಯ ಜನಾರ್ದನ ಕುಲಾಲ್ ಬೊಂಡಾಲ, , ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಪದ್ಮನಾಭ ಸಪಲ್ಯ ನಾಟಿ, ರೋಹಿತಾಕ್ಷ ಬೆರ್ಕಳ, ಮಾಧವ ಇದ್ದರು. ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಸ್ವಾಗತಿಸಿ, ಪುರುಷೋತ್ತಮ ಸಾಲ್ಯಾನ್ ಪ್ರಸ್ತಾವಿಕವಾಗಿ ಮಾತನಾಡಿದರು. ಕೇಶವ ಬರ್ಕೆ ವಂದಿಸಿದರು. ರಾಮ್‌ದಾಸ್ ಬಂಟ್ವಾಳ ಮತ್ತು ವಸಂತ ಭೀಮಗದ್ದೆ ನಿರೂಪಿಸಿದರು. ಮಂಗಳವಾರ ಗಣೇಶೋತ್ಸವದ ಸಮಾರೋಪ ಸಮಾರಂಭದ ಬಳಿಕ ಶ್ರೀ ಗಣೇಶನ ಭವ್ಯ ಶೋಭಾಯಾತ್ರೆ ನಡೆದು, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ನೇತ್ರಾವತಿ ನದಿಯಲ್ಲಿ ಮೂರ್ತಿ ಜಲಸ್ತಂಭನಗೊಳಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.