ಮನೆಯಿಂದ ಲಕ್ಷಾಂತರ ಮೌಲ್ಯದ ಸ್ವತ್ತು ಕಳವು
ಬಂಟ್ವಾಳ: ವಿಟ್ಲದಲ್ಲಿ ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ವಿಟ್ಲ ಕಸಬಾ ಗ್ರಾಮದ ನೆತ್ರಕರೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರು. ಮೌಲ್ಯದ ಸ್ವತ್ತುಗಳನ್ನು ದೋಚಿದ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.
ನೆತ್ರಕೆರೆ ನಿವಾಸಿ, ಪುತ್ತೂರು ಗಣೇಶ್ ಬೀಡಿ ಮ್ಯಾನೆಜರ್ ಕೆ.ರವೀಂದ್ರ ಕಾಮತ್ ಅವರ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ಮೂರು ಕಪಾಟನ್ನು ಮುರಿದು ಅದರಲ್ಲಿದ್ದ ರು. ಒಂದು ಲಕ್ಷ ಮೌಲ್ಯದ ರೇಡೋ ವಾಚ್ ಹಾಗೂ ರು. 4.5 ಸಾವಿರ ನಗದು ದೋಚಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ. ಮನೆಯಿಂದ ಕಳ್ಳರು ಇನ್ನೂ ಚಿನ್ನಾಭರಣಗಳನ್ನು ಕಳವುಗೈದಿರಬಹುದೆಂಬ ಅನುಮಾನ ಇದೆ. ಮನೆಯೊಡತಿ ಮನೆಗೆ ಬಂದ ನಂತರವಷ್ಟೇ ಈ ಬಗ್ಗೆ ಮಾಹಿತಿ ದೊರೆಯಬಹುದು ಎಂದು ಕಾಮತ್ ತಿಳಿಸಿದ್ದಾರೆ.
ಈ ಮನೆಯವರು ಕೆಲವು ದಿನಗಳ ಹಿಂದೆಯೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಕಾಮತ್ ಅವರು ಮನೆಗೆ ಬಂದು ಹೋಗುತ್ತಿದ್ದರು. ಕಳೆದ ಒಂದು ವಾರದಿಂದ ಅವರೂ ಕೂಡ ಈ ಕಡೆ ಬಂದಿರಲಿಲ್ಲ. ಸೋಮವಾರ ರಾತ್ರಿ ಅವರು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಮಾಹಿತಿ ನೀಡಿಲ್ಲ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

