ದಕ್ಷಿಣ ಕನ್ನಡ

ಹೊಸಕೋಟೆಗೆ 8.50 ಕೋಟಿ ಮಂಜೂರು

Published On :

ಸೂಲಿಬೆಲೆ:  ಶೈಕ್ಷಣಿಕ ಪ್ರಗತಿಗಾಗಿ ಸರ್ವ ಶಿಕ್ಷ ಅಭಿಯಾನ ಯೋಜನೆಯಡಿಯಲ್ಲಿ ಹೊಸಕೋಟೆ ತಾಲೂಕಿಗೆ ರು.8.50 ಕೋಟಿ ಹಣ ಮಂಜೂರಾಗಿದೆ ಎಂದು ಶಾಸಕ ಎನ್. ನಾಗರಾಜ್ ಹೇಳಿದ್ದಾರೆ.
ಸೂಲಿಬೆಲೆ ಪದವಿ ಕಾಲೇಜಿನಲ್ಲಿ ಹೆಚ್ಚುವರಿಯಾಗಿ ರು.50  ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ 4 ಕೊಠಡಿಗಳಿಗೆ ಸೋಮವಾರ ಶಂಕುಸ್ಥಾಪನೆ ನಡೆಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ರು.18,500 ಕೋಟಿ ಹಣವನ್ನು ಮೀಸಲಿಟ್ಟಿದೆ. ವಿದ್ಯಾರ್ಥಿಗಳು ಆಂಗ್ಲ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕು. ಭ್ರಷ್ಟಚಾರ ಮುಕ್ತ ಸಮಾಜವನ್ನು ಕಟ್ಟವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಅನುಗುಣವಾಗಿ ಹೊಸಕೋಟೆ ತಾ.ಕರಪನಹಳ್ಳಿ ಬಳಿ ಸ್ಥಾಪನೆ ಮಾಡಲು ಉದ್ದೇಶಿರುವ ಪ್ರತ್ಯೇಕ ವಿವಿ ಶೀಘ್ರ ಕಾರ್ಯಾರಂಭಕ್ಕಾಗಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಣಿ ಮಾಡಿದಂತೆ ಶೇ.60ರಷ್ಟು ಯೋಜನೆಗಳನ್ನು ಈಡೇರಿಸಿದೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ನೀರಾವರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದರು. ಕಾಲೇಜಿನಲ್ಲಿ ಕಂಪ್ಯೂಟರಗಳ ಅಗತ್ಯವಿದೆ ಎಂಬ ವಿದ್ಯಾರ್ಥಿಗಳ ಬೇಡಿಕೆಗೆ ಸ್ವಂದಿಸಿದ ಶಾಸಕರು 10 ಕಂಪ್ಯೂಟರ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗೆ 25 ಸಾವಿರ ರು. ಹಣವನ್ನು ಪ್ರಭಾರಿ ಪ್ರಾಂಶುಪಾಲ ವೆಂಕಟೇಶ ಅವರಿಗೆ ನೀಡಿ ಇನ್ನೂ ವಾರದಲ್ಲಿ ಕಂಪ್ಯೂಟರ್ ಕಲಿಕೆ ವಿದ್ಯಾರ್ಥಿಗಳಿಗೆ ಲಭ್ಯವಾಗಬೇಕು ಎಂದು ತಾಕೀತು ಮಾಡಿದರು. ಇದಕ್ಕೂ ಮುನ್ನ ನಿವೃತ್ತ ಪ್ರಾಂಶುಪಾಲ ಚನ್ನಪ್ಪ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.