ಸುದ್ದಿ ಸಂಕ್ಷೇಪ
ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿಯೊಬ್ಬರು ವಾಪಾಸ್ ಬಾರದೆ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ. ಬೋಳಂತೂರು ಗ್ರಾಮದ ಗುಂಡಿಮಜಲು ನಿವಾಸಿ ಕೊರಗಪ್ಪ ಪುಜಾರಿ(37) ನಾಪತ್ತೆಯಾದವರು. ಸೆ.2 ರಂದು ಬೆಳಗ್ಗೆ ಸೆಂಟ್ರಿಂಗ್ ಕೆಲಸಕ್ಕೆಂದು ಮನೆಯಿಂದ ತೆರಳಿದವರು ವಾಪಾಸ್ ಬಂದಿಲ್ಲ, ಸಂಬಂಧಿಕರ ಮನೆಗಳಲ್ಲೂ ವಿಚಾರಿಸಲಾಗಿದ್ದು ಅಲ್ಲಿಯೂ ಪತ್ತೆಯಾಗಿಲ್ಲ ಎಂದು ಅವರ ಸಹೋದರ ಧನಂಜಯ ಎಂಬವರು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ
ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೇತ್ರಾವತಿ ರೇಲ್ವೆ ಸೇತುವೆ ಬಳಿ ಶವ ಪತ್ತೆ
ಮಂಗಳೂರು: ನೇತ್ರಾವತಿ ರೈಲ್ವೆ ಸೇತುವೆ ಬಳಿ ಮಂಜೇಶ್ವರದ ನಾಗೇಂದ್ರ(25) ಎಂಬವರ ಮೃತದೇಹ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಂದೆ- ತಾಯಿ ಮೃತಪಟ್ಟಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ. ಕುಡಿತದ ಚಟವಿದ್ದ ಈತ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾರ್ನಲ್ಲಿ ವ್ಯಕ್ತಿ ಮೇಲೆ ಹಲ್ಲೆ- ದೂರು
ಮೂಲ್ಕಿ: ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯ ಬಾರ್ನಲ್ಲಿ ಬುಧವಾರ ಬಳ್ಕುಂಜೆ ಗ್ರಾಮದ ಕೊಲ್ಲೂರು ಪದವಿನ ನಿವಾಸಿ ವಿಠಲ ಎಂಬತಾ ಕುಳಿತಿದ್ದಾಗ ಅಲ್ಲಿಗೆ ಬಂದ ಜಯ ಮುಗೇರ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿನಿ, ಹಲ್ಲೆ ನಡೆಸಿದ್ದಾರೆ. ಇದರಿಂದ ತೀವ್ರ ಗಾಯಗೊಂಡ ವಿಠಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

