ದಕ್ಷಿಣ ಕನ್ನಡ

ಅಡಕೆ ಬೆಳೆಗಾರರಿಗೆ ಪರಿಹಾರ ಒದಗಿಸಲು ಕೇಂದ್ರ ಮಧ್ಯಪ್ರವೇಶಿಸಲು ಆಗ್ರಹ

Published On :

ಮಂಗಳೂರು: ದ.ಕ. ಜಿಲ್ಲೆಯ ಅಡಕೆ ಬೆಳೆಗಾರರಿಗೆ ಸರ್ಕಾರ ನೀಡಿರುವ ಪರಿಹಾರ ಮೊತ್ತ ಕಡಿಮೆಯಾಗಿದ್ದು, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆ ಪರಿಹರಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ. ಕೆನರಾ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿಯನ್ನು ಸಲ್ಲಿಸಿತು. ದ.ಕ. ಜಿಲ್ಲೆಯಲ್ಲಿ ಶೇ. 99 ಅಡಕೆ ಕೃಷಿ ನಾಶವಾಗಿದೆ. ಅಡಕೆಗೆ ಉತ್ತಮ ಮಾರುಕಟ್ಟೆ ಧಾರಣೆ ಇರುವ ಸಂದರ್ಭದಲ್ಲಿ ಕೊಳೆರೋಗ ಅಡಕೆ ರೈತರನ್ನು ಕಂಗಲಾಗಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಒಂದು ಹೆಕ್ಟೇರ್‌ಗೆ ರು. 1 ಸಾವಿರ ಪರಿಹಾರ ಮೊತ್ತ ಬಿಡುಗಡೆ ಮಾಡಿದ್ದು, ಸುಳ್ಯ ತಾಲೂಕಿಗೆ ಕೇವಲ ರು. 75 ಲಕ್ಷ ಮತ್ತು ಕಡಬ ಹೋಬಳಿಗೆ ರು. 10 ಲಕ್ಷ ಮಾತ್ರ ಬಿಡುಗಡೆಗೊಳಿಸಿದೆ. ಆದರೆ ಸುಳ್ಯ ತಾಲೂಕಿನಲ್ಲಿ 16,400ಕ್ಕಿಂತ ಹೆಚ್ಚಿನ ರೈತ ಕುಟುಂಬಗಳಿದ್ದು, ಮೊದಲ ಕಂತಿನಲ್ಲಿ ಬಿಡುಗಡೆಯಾದ ಹಣ ಅಧಿಕಾರಿ ಮಟ್ಟದಲ್ಲಿ  ಪರಿಹಾರ ಮೊತ್ತ ಕಡಿಮೆಯಾಗಿದೆ ಎಂದು ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹೇಳಿದ್ದಾರೆ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ವಾಸ್ತವ ಸಂಗತಿಯ ವರದಿಯನ್ನು ತರಿಸಿ ಕೊಳೆರೋಗಕ್ಕೆ ತುತ್ತಾದ ರೈತರಿಗೆ ವಿಶೇಷ ಪ್ಯಾಕೇಜ್ ಮೂಲಕ ಪರಿಹಾರಧನ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.