ದಕ್ಷಿಣ ಕನ್ನಡ

ಅ.5ರಿಂದ ಪುತ್ತೂರು ದಸರಾ

Published On :

ಪುತ್ತೂರು: 61ನೇ ವರ್ಷದ ಪುತ್ತೂರು ದಸರಾ ನಾಡಹಬ್ಬ ಅ.5ರಿಂದ 13ರತನಕ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ನ್ಯಾಯವಾದಿ ಎನ್.ಕೆ. ಜಗನ್ನಿವಾಸ ರಾವ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯಅಚ್ಚುತ ಮೂಡೆತ್ತಾಯ ಮತ್ತು ಕಾರ್ಯ ನಿರ್ವಹಣಾಧಿಕಾರಿ ಸಿ.ಯು. ಪೂವಪ್ಪ ಭಾಗವಹಿಸಲಿದ್ದಾರೆ ಎಂದರು. ಸಮಾರೋಪ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಭಾಗವಹಿಸಲಿದ್ದಾರೆ. ಈ ಸಂದರ್ಭ ಶಿಲಾಶಿಲ್ಪಿ ರಾಜು ಎಚ್. ನಾಯಕ್ ಮತ್ತು ಕಾಷ್ಠಶಿಲ್ಪಿ ನಾರಾಯಣ ಆಚಾರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ನಾಡಹಬ್ಬದಲ್ಲಿ ಪ್ರತಿದಿನ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದಸರಾ ನಾಡಹಬ್ಬ ಸಮಿತಿಯ ಗೌರವ ಅಧ್ಯಕ್ಷ ಸುಬ್ರಹ್ಮಣ್ಯಂ ಎನ್, ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಮಳಿ, ಖಜಾಂಚಿ ರಮೇಶ್ ಬಾಬು, ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಯು. ಪೂವಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.