ದಕ್ಷಿಣ ಕನ್ನಡ

ಬೆತ್ತ ಸಾಗಾಟ: ಇಬ್ಬರ ಬಂಧನ

Published On :

ಉಪ್ಪಿನಂಗಡಿ: ಸರ್ಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಕಡಿದು ಸಾಗಾಟ ಮಾಡಲಾಗುತ್ತಿದ್ದ ಬೆತ್ತವನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾಧಿಕಾರಿಗಳು ಪತ್ತೆ ಹಚ್ಚಿ ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರಿನ ಸೂಮಶೇಖರ ಯಾನೆ ಗುರುಮೂರ್ತಿ ಹಾಗೂ ಪಯಾಜ್ ಖಾನ್ ಯಾನೆ ಫರೋಜ್ ಖಾನ್ ಬಂಧಿತರು.
ಸೋಮವಾರ ನಸುಕಿನ ವೇಳೆ ಶಿರಾಡಿ ಗ್ರಾಮದ ಬರ್ಚನ ಹಳ್ಳ ಎಂಬಲ್ಲಿ ಅರಣ್ಯ ಇಲಾಖಾಧಿಕಾರಿಗಳು ಗಸ್ತು ನಿರತರಾಗಿದ್ದ ವೇಳೆ ಬೆತ್ತದ ಅಕ್ರಮ ಸಾಗಾಟ ಪತ್ತೆಯಾಗಿದೆ. ಸುಬ್ರಹ್ಮಣ್ಯ ಕಡೆಯಿಂದ ವೇಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಸುಮಾರು 50 ಸಾವಿರಕ್ಕೂ ಮಿಕ್ಕಿದ ಮೌಲ್ಯದ ಬೆತ್ತವಿರುವುದು ಕಂಡುಬಂತು.
ಸಾಗಾಟಕ್ಕೆ ಬಳಸಿದ ವಾಹನ ಸಹಿತ ಬೆತ್ತವನ್ನು ಇಲಾಖೆ ಸ್ವಾಧೀನ ಪಡಿಸಿಕೊಂಡಿದ್ದು ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ವಲಯ ಉಪ ಅರಣ್ಯಾಧಿಕಾರಿ ತ್ಯಾಗರಾಜ್, ಅರಣ್ಯ ರಕ್ಷಕರಾದ ಸುಧೀರ್ ಹೆಗ್ಡೆ, ಪ್ರವೀಣ, ಪದ್ಮಯ್ಯ ಗೌಡ ಪಾಲ್ಗೊಂಡಿದ್ದರು. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.