ದಕ್ಷಿಣ ಕನ್ನಡ

ಅ.10ರಿಂದ ಸಾಹಿತ್ಯ, ಯಕ್ಷಗಾನ ಉತ್ಸವ

Published On :

ಸುಳ್ಯ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೆರವಿನೊಂದಿಗೆ ಸುಳ್ಯದ ತೆಂಕುತಿಟ್ಟು ಯಕ್ಷಗಾನ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಹಳೆಗನ್ನಡ ಸಾಹಿತ್ಯ, ಯಕ್ಷಗಾನ ಪ್ರಸಂಗಗಳು ಮತ್ತು ಯಕ್ಷಗಾನ ಪರಿಭಾಷೆಯ ಕುರಿತಂತೆ ಅ.17ರಿಂದ 27ರವರೆಗೆ 'ಕನ್ನಡ ಸಾಹಿತ್ಯ ಮತ್ತು ಕಲಾ ಕಾರ್ಯಾಗಾರ' ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಶಾಸಕ ಎಸ್.ಅಂಗಾರ ಗೌರವಾಧ್ಯಕ್ಷತೆಯಲ್ಲಿ ಚಂದ್ರಶೇಖರ ದಾಮ್ಲೆ ಅಧ್ಯಕ್ಷತೆಯಲ್ಲಿ ಉತ್ಸವದ ಕುರಿತು ಸಿದ್ಧತೆಗಳು ಆರಂಭವಾಗಿವೆ. ಪ್ರತಿ ದಿನ ಹಳೆಗನ್ನಡ ಕಾವ್ಯಗಳು ಮತ್ತು ಯಕ್ಷಗಾನ ಕುರಿತು ಸಾಹಿತಿಗಳು ಹಾಗೂ ವಿದ್ವಾಂಸರಿಂದ ಉಪನ್ಯಾಸಗಳು ನಡೆಯಲಿವೆ. 10 ದಿನಗಳ ಕಾಲ ದಿನಕ್ಕೆರಡರಂತೆ ಮಹಾಭಾರತದ ಒಟ್ಟು 20 ಕಾಲಮಿತಿಯ ಯಕ್ಷಗಾನ ಪ್ರಸಂಗಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ದಾಮ್ಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅ.17ರಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಬಿ .ರಮಾನಾಥ ರೈ ಉತ್ಸವ ಉದ್ಘಾಟಿಸುವರು. ಸುಬ್ರಹ್ಮಣ್ಯದ  ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರ ಭಾಗವಹಿಸಲಿದ್ದಾರೆ.  ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ. ಸಂಖ್ಯೆ 9945506045ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.  ಶ್ಯಾಮ್ ಮಾತನಡ್ಕ, ಭಕ್ತವತ್ಸಲ ನೀರಬಿದರೆ, ಆನೆಕಾರ್ ಗಣಪ್ಪಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.