ಅವಿಭಜಿತ ಜಿಲ್ಲೆಯಲ್ಲಿ ನಾಲ್ವರು ಆತ್ಮಹತ್ಯೆ
ಬಂಟ್ವಾಳ/ಉಡುಪಿ/ಉಪ್ಪಿನಂಗಡಿ: ಪ್ರತ್ಯೇಕ ಪ್ರಕರಣಗಳಲ್ಲಿ ಅವಿಭಜಿತ ಜಿಲ್ಲೆಯಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೀಮೆಎಣ್ಣೆ ಸುರಿದು ಆತ್ಮಹತ್ಯೆ: ಮಹಿಳೆಯೊಬ್ಬರು ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಳ್ತಿಲ ಗ್ರಾಮದ ಬಿ.ಆರ್. ನಗರದಲ್ಲಿ ಗುರುವಾರ ಸಂಜೆ ನಡೆದಿದೆ.
ಇಲ್ಲಿನ ಐತಪ್ಪ ಎಂಬವರ ಪತ್ನಿ ನಳಿನಿ(48) ಮೃತರು. ವಿಪರೀತ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ನೊಂದು ಈ ಕೃತ್ಯ ಮಾಡಿಕೊಂಡಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ವಿಷ ಸೇವಿಸಿ ಆತ್ಮಹತ್ಯೆ: ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೈಂದೂರಿನ ಹೆರಂಜಾಲು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತರು ಶೇಷು ಗಾಣಿಗ (55). ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಮದ್ಯಪಾನ ಚಟ ಹೊಂದಿದ್ದು ವಿಪರೀತ ಸಾಲ ಮಾಡಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಕೀಟನಾಶಕ ಕುಡಿದಿದ್ದರು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಜುನಾಥ ಗಾಣಿಗ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿ ಆತ್ಮಹತ್ಯೆ: ಉಡುಪಿಯ ರೈಲ್ವೇ ಸ್ಟೇಷನ್‌ನ ಬೋರ್ಡ್‌ನಿಂದ ಪಡುಬಿದ್ರಿಗೆ ಹೋಗುವ ಪ್ಲಾಟ್‌ಫಾರ್ಮ್ ಬಳಿ ಮರಕ್ಕೆ ನೇಣು ಬಿಗಿದು ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬುಧವಾರ ನಡೆದಿದೆ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ಕೊಯಿಲ ಗ್ರಾಮದ ಗೋಳಿತ್ತಡಿ ಕಂಪ ಎಂಬಲ್ಲಿ ರಾಮಚಂದ್ರ (30) ಎಂಬವರು ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂಪ ನಿವಾಸಿ ಜಾರಪ್ಪ ಪೂಜಾರಿ ಎಂಬವರ ಮಗನಾಗಿರುವ ರಾಮಚಂದ್ರ, ತಾವು ಮಾಡಿರುವ ಕೈ ಸಾಲದಿಂದ ಬೇಸತ್ತು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಹೋದರ ಪೂವಪ್ಪ ಪೂಜಾರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

