ಶಾಸಕರಿಂದ ಬೇನಾಮಿ ಗುತ್ತಿಗೆ, ಹಫ್ತಾ ವಸೂಲಿ: ಪಾಲೇಮಾರ್
ಮಂಗಳೂರು: ಶಾಸಕ ಮೊಯ್ದಿನ್ ಬಾವ ಎಂಆರ್ಪಿಎಲ್ ಕಾಮಗಾರಿಗಳ ಬೇನಾಮಿ ಗುತ್ತಿಗೆ ವಹಿಸಿಕೊಂಡು ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆರೋಪಿಸಿದ್ದಾರೆ.
ಇತ್ತೀಚೆಗೆ 40 ಕೋಟಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿದ್ದಾರೆ. ಹೆಸರಿಗಷ್ಟೇ ಸಂಸ್ಥೆ, ಲಾಭದಲ್ಲಿ ಶೇ.2 ಸಂಸ್ಥೆಗೆ ನೀಡಿ ಉಳಿದ ಲಾಭ ನುಂಗುತ್ತಿದ್ದಾರೆ, ಶಾಸಕರ ಬದಲು ಗುತ್ತಿಗೆದಾರರಂತೆ ವರ್ತಿಸುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಸುರತ್ಕಲ್ ಪೊಲೀಸ್ ಠಾಣೆಯೊಂದರಲ್ಲಿಯೇ ಕಾಂಗ್ರೆಸ್ ಸರ್ಕಾರ ಬಂದ ಬಳಿಕ 86 ದನ ಕಳವು ಪ್ರಕರಣ ದಾಖಲಾಗಿರುವುದು ಸುರತ್ಕಲ್ ಪ್ರದೇಶದ ಗೋ ಕಳ್ಳ ಸಾಗಾಟ ಪ್ರಮಾಣ ಬೆಳಕಿಗೆ ಬಂದಿದೆ. ದೇರಳಕಟ್ಟೆ ಪ್ರಕರಣವೂ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದ ತಪ್ಪಿರುವುದಕ್ಕೆ ಸಾಕ್ಷಿ ಎಂದರು.
ಕಾಂಗ್ರೆಸ್ ಸರ್ಕಾರ ಸ್ವಯಂ ಘೋಷಿತ ಆಸ್ತಿ ತೆರಿಗೆ ರದ್ದು ಮಾಡುತ್ತೇವೆ ಹೇಳಿ ತೆರಿಗೆ ಹೆಚ್ಚು ಮಾಡಿದರು ಸಿಂಗಲ್ ಸೈಟ್ ನೀಡುವುದಾಗಿ ಸುಳ್ಳು ಭರವಸೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಅವಧಿಯಲ್ಲಿ ಸಚಿವನಾಗಿದ್ದಾಗ ಮಂಗಳೂರಿಗೆ 500 ಕೋಟಿ ವಿಶೇಷ ಅನುದಾನದಡಿ ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ. ಇದು ದಾಖಲೆಗಳು ಹೇಳುತ್ತಿವೆ. ಸರ್ಕಾರ ಸಿಆರ್ಝಡ್ ನೋಟಿಫಿಕೇಶನ್ ಹೊರಡಿಸುವ ಮೂಲಕ ಮೀನುಗಾರರಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ ಸಿಂಹ ನಾಯಕ್, ಉಮಾನಾಥ ಕೋಟ್ಯಾನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

