ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಪರಿಶಿಷ್ಟ ಜಾತಿ, ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ವತಿಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ 14 ರಂದು ಲೇಡಿಹಿಲ್ ಸೇವಾ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನಡೆಯಲಿದೆ. ತರಬೇತಿಯಲ್ಲಿ ಮೇಣದ ಬತ್ತಿ ತಯಾರಿಕೆ, ಹರ್ಬಲ್ ಫಿನಾಯಿಲ್, ಸೋಪು ವಾಟರ್, ಕ್ಲೀನಿಂಗ್ ಪೌಡರ್ ತಯಾರಿಕೆ, ಸ್ವ-ಉದ್ಯೋಗದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಪ.ಜಾ./ ಪಂ., ಹಿಂದುಳಿದ, ಅಲ್ಪಸಂಖ್ಯಾತ ಮಹಿಳೆಯರು ಪಾಲ್ಗೊಳ್ಳಬಹುದು. ಮಾಹಿತಿಗೆ ಅಧ್ಯಕ್ಷ ಮೋಹನಾಂಗಯ್ಯ 8105819922 ಸಂಪರ್ಕಿಸಬಹುದು.
ರುಡ್ಸೆಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಳ್ತಂಗಡಿ: ಉಜಿರೆ ರುಡ್ಸೆಟ್ ಸಂಸ್ಥೆಯ 2013-14ನೇ ಸಾಲಿನಲ್ಲಿ 32 ವಿವಿಧ ತರಬೇತಿಗಳನ್ನು ನೀಡಿ 935 ನಿರುದ್ಯೋಗಿ ಯುವಕ, ಯುವತಿಯರು ವಿವಿಧ ಕೌಶಲ್ಯಗಳನ್ನು ಪಡೆದು ಯಶಸ್ವಿ ಸ್ವ ಉದ್ಯೋಗಿಗಳಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಕೂಡ ವಿವಿಧ ಸ್ವ ಉದ್ಯೋಗ ತರಬೇತಿಗಳನ್ನು ಹಮ್ಮಿಕೊಂಡಿದ್ದು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಭರಿಸಬೇಕಾಗಿಲ್ಲ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ತರಬೇತಿಗಳಿಗೆ ಬರಲು 18-45 ವರ್ಷ ವಯೋವುತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಭರ್ತಿ ಮಾಡಿ: ನಿರ್ದೇಶಕರು, ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ: 08256-236404ಗೆ ಸಂಪರ್ಕಿಸಬಹುದು ಎಂದು ರುಟ್ಸೆಟ್ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

