ದಕ್ಷಿಣ ಕನ್ನಡ

ಗ್ಲೋಬಲ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ

Published On :

ಮಂಗಳೂರು: ಉರ್ವ ಮಠದಕಣಿಯಲ್ಲಿರುವ ಗ್ಲೋಬಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯು ಬ್ರಿಟನ್ ಮೂಲದ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಹೊಂದಿದೆ. ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸುತ್ತಿದೆ. ಆರೋಗ್ಯ ಸೇವೆಯಲ್ಲಿ 30 ವರ್ಷ ಅನುಭವ ಹೊಂದಿರುವ ಡಾ. ಸುಧಾರಾಮ್ ರೈ ಮತ್ತು ಡಾ. ಸುಶೀಲ್ ಜತ್ತನ್ನ ಪಾಲುದಾರಿಕೆಯಲ್ಲಿ ಪ್ರಾರಂಭಗೊಂಡಿದೆ. ಆಸ್ಪತ್ರೆಯಲ್ಲಿ ಎಲ್ಲ ವಿಧದ ರೋಗಗಳ ಚಿಕಿತ್ಸೆಗೆ ಅಗತ್ಯವಿರುವ ಅತ್ಯಾಧುನಿಕ ಯಂತ್ರೋಪರಕರಣಗಳು, ಲ್ಯಾಮಿನರ್ ನೆಲಹಾಸು ಹೊಂದಿರುವ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ನಿಗಾ ಘಟಕ ಮತ್ತು ಅಪಾಘಾತ ಚಿಕಿತ್ಸೆ, ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕೀಲು ಮತ್ತು ಮೂಳೆ ಚಿಕಿತ್ಸೆ, ಕಿಡ್ನಿ ಡಯಾಲಿಸಿಸ್ ಚಿಕಿತ್ಸೆ, ಗ್ಯಾಸ್ಟೋ ಎಂಟಾರಾಲಜಿ, ದಂತ ಚಿಕಿತ್ಸೆ, ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆ ವಿಭಾಗಗಳಿವೆ. ತಜ್ಞ ವೈದ್ಯರು ಸಲಹೆ ಮತ್ತು ಚಿಕಿತ್ಸೆಗೆ ಲಭ್ಯವಿರುತ್ತಾರೆ. ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗುವಿನ ಆರೈಕೆಗೆ  ಮುತುವರ್ಜಿ ವಹಿಸಲಾಗುತ್ತದೆ. ಪ್ರಸವ ಪೂರ್ವ ಸಲಹೆ ಮತ್ತು ಹೆರಿಗೆ ಸಮಯದಲ್ಲಿ ಪ್ರಸೂತಿ ತಜ್ಞರಿಂದ ಹೆರಿಗೆ ಮಾಡಲಾಗುತ್ತದೆ. ಹೆರಿಗೆ ನಂತರ ಒಂದು ವರ್ಷದವರೆಗೆ ಮಗುವಿನ ಬೆಳವಣಿಗೆ ಮತ್ತು ಚಟುವಟಿಕೆಗಳನ್ನು ತಜ್ಞ ವೈದ್ಯರು ಗಮನಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ನೀಡಲಿದ್ದಾರೆ. ಪ್ರಥಮ ಬಾರಿಗೆ ಗ್ಲೋಬಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಈ ಸೌಲಭ್ಯ ಒದಗಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.