ಚುನಾವಣೆ ಕರ್ತವ್ಯಾಧಿಕಾರಿ ಸಾವು
ಕುಂದಾಪುರ: ಚುನಾವಣೆ ಕರ್ತವ್ಯದಲ್ಲಿದ್ದ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಕುಂದಾಪುರ ತಾಲೂಕು ಕಚೇರಿಯ ಆಹಾರ ಶಿರಸ್ತೆದಾರ ಜನಾರ್ದನ ಎಚ್. ಮೃತರು. ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದು, ಮಧ್ಯಾಹ್ನ 1.20ಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ ವಾಹನದಲ್ಲಿ ಕುಳಿತಾಗ ತಲೆ ಹಿಂದಕ್ಕೆ ವಾಲಿತು. ತಕ್ಷಣ ಅವರನ್ನು ಗಮನಿಸಿದ ಜೊತೆಯಲ್ಲಿದ್ದ ದಿನೇಶ್ ಹಾಗೂ ಶಿವೂ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆತಂದರು. ಅದರೆ ಅವರಾಗಲೇ ಮೃತಪಟ್ಟಿದ್ದರು. ಈ ಬಗ್ಗೆ ಕುಂದಾಪುರ ತಹಸೀಲ್ದಾರ್ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಮೂಲ್ಕಿ: ಪುನರೂರು ಬಳಿಯ ಕಲ್ಲಟ್ಟ ನಿವಾಸಿ ಬೋರ (65) ಎಂಬವರು ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇವರ ಮಗಳಿಗೆ ವಿವಾಹ ನೆರವೇರಿದ್ದು, ಮದುವೆ ಬಗ್ಗೆ ತಿಳಿಸದಿದೇ ಇದ್ದುದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣೆ ಪ್ರಚಾರ ವೇಳೆ ಹಲ್ಲೆ
ಮಂಗಳೂರು: ಉಳ್ಳಾಲದಲ್ಲಿ ಕಾಂಗ್ರೆಸ್ ಪ್ರಚಾರ ನಡೆಸುತ್ತಿದ್ದ ಕೆರೆಬೈಲು ನಿವಾಸಿ ವಿಘ್ನೇಶ್ (18), ಶರೀಫ್ (18) ಹಲ್ಲೆ ನಡೆಸಿದ್ದು, ಪವಿತ್ರಕುಮಾರ್ ಮತ್ತು ಯುವಕರ ತಂಡ ಹಲ್ಲೆ ನಡೆಸಿದ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿ ಆಕಸ್ಮಿಕ: ಮನೆ ಭಸ್ಮ
ಮಂಗಳೂರು: ಬಂಟ್ಸ್ ಹಾಸ್ಟೆಲ್ ಸಮೀಪದ ಸಿ.ವಿ.ನಾಯಕ್ ಸಭಾಂಗಣ ಬಳಿ ಮನೆಯೊಂದು ಬೆಂಕಿ ಆಕಸ್ಮಿಕದಿಂದ ಸುಟ್ಟುಹೋಗಿದೆ. ಭಾನುವಾರ ಸಂಜೆ 6.40 ರವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಮೆಲಂತಸ್ತಿನಲ್ಲಿ ಪೇಪರ್ ಮತ್ತು ದಾಖಲೆ ಕಡತಗಳಿದ್ದವು. ಇದಕ್ಕೆ ಶಾರ್ಟ್ ಸರ್ಕ್ಯೂಟ್ ಮೂಲಕ ಬೆಂಕಿ ಹಬ್ಬಿ ಮನೆ ಸುಟ್ಟು ಹೋಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

