ದಕ್ಷಿಣ ಕನ್ನಡ

ಮೌಲ್ಯಮಾಪನ ಮುಂದೂಡಲು ಮನವಿ

Published On :

ಮಂಗಳೂರು: ಕ್ರೈಸ್ತ ಬಾಂಧವರಿಗೆ ಏ. 20 ರಂದು ಈಸ್ಟರ್ ಸಂಡೆ ಹಬ್ಬವಿರುವುದರಿಂದ ಎಸ್ಸೆಸ್ಸೆಲ್ಸಿ ಪ್ರಶ್ನೆತ್ರಿಕೆ ಮೌಲ್ಯಮಾಪನವನ್ನು ಮುಂದೂಡುವಂತೆ ಕರ್ನಾಟಕ ಪ್ರೌಢಶಾಲೆ ಸಹಶಿಕ್ಷಕರ ಸಂಘ ದ.ಕ. ಜಿಲ್ಲಾ ಘಟಕ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಲ್ಲಿ ಮನವಿ ಮಾಡಿದೆ.  ವಿದ್ಯಾಂಗ ಉಪನಿರ್ದೇಶಕರಲ್ಲಿ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ನಿರ್ದೇಶಕ ದೇವಪ್ರಕಾಶ್ ಅವರಲ್ಲಿ ಸಮಲೋಚಿಸಿ ಶಿಕ್ಷಕರ ಪರವಾದ ನ್ಯಾಯಸಮ್ಮತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶಿರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೇಜಾವರ ಮಠದಲ್ಲಿ ಹನುಮ ಜಯಂತಿ ನಾಳೆ
ಮಂಗಳೂರು: ಬೈಕಂಪಾಡಿ ಕೆಂಜಾರು ಸಮೀಪದ ಪೇಜಾವರ ಮೂಲ ಮಠದಲ್ಲಿ ಏ. 15 ರಂದು ಹನುಮಜಯಂತಿ ಮಹೋತ್ಸವ ನಡೆಯಲಿದೆ. ಮಹೋತ್ಸವದಲ್ಲಿ ಪೇಜಾವರ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರು ಪಾಲ್ಗೊಳ್ಳುವರು.  ಬೆಳಗ್ಗೆ 8 ಗಂಟೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ತಿರುಪತಿ ದಾಸ ಸಾಹಿತ್ಯ ಪ್ರೊಜೆಕ್ಟ್ ಭಜನಾ ಮಂಡಳಿ ವತಿಯಿಂದ ಭಜನೆ , ಬೆಳಗ್ಗೆ 11 ಗಂಟೆಗೆ ವಿದ್ವಾಂಸರಿಂದ ಪ್ರವಚನ, ಮಧ್ಯಾಹ್ನ 12 ಗಂಟೆಗೆ ಶ್ರೀ ಪೇಜಾವರ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿ, ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಸೋದೆ ಮಠಾದೀಶ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಸಂಜೆ 6.30ಕ್ಕೆ ಹೊಸನಗರ ಮೇಳದವರಿಂದ ಪಂಚವಟಿ-ಇಂದ್ರಜಿತು ಕಾಳಗ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.