27ರಂದು ಬಿಲ್ಲವ ವಧು- ವರಾನ್ವೇಷಣೆ
ಮೂಲ್ಕಿ: ಬೆಂಗಳೂರಿನ ಬಿಲ್ಲವ ಎಸೋಸಿಯೇಶನ್ ಆಶ್ರಯದಲ್ಲಿ ಏ.27ರಂದು ಮೂಲ್ಕಿಯ ಬಿಲ್ಲವ ಸಂಘದಲ್ಲಿ ಸಮಾಜದ ವಧು- ವರಾನ್ವೇಷಣೆ ಕಾರ್ಯಕ್ರಮ ಜರುಗಲಿದೆ ಎಂದು ಎಸೋಸಿಯೇಶನ್ ಅಧ್ಯಕ್ಷ ಎಂ. ವೇದ ಕುಮಾರ್ ತಿಳಿಸಿದ್ದಾರೆ.
ಮೂಲ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಬಿಲ್ಲವ ಎಸೋಸಿಯೇಶನ್ ಕಳೆದ 5 ವರ್ಷಗಳಿಂದ ವಧು- ವರಾನ್ವೇಷಣೆ ಕಾರ್ಯಕ್ರಮ ನಡೆಸುತ್ತಿದ್ದು, ಮಂಗಳೂರು, ಉಡುಪಿ, ಕಾಸರಗೋಡು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳಿಂದ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏ.27ರಂದು ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಉಟೋಪಚಾರದ ವ್ಯವಸ್ಥೆಯಿದ್ದು, ಆಸಕ್ತರು ಏ.20ರೊಳಗೆ ಕಾರ್ಯಾಲಯಗಳಿಂದ ಅರ್ಜಿಗಳನ್ನು ಪಡೆದು ಸಲ್ಲಿಸುವಂತೆ ಅವರು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಗೋಪಿನಾಥ ಪಡಂಗ ಮೂಲ್ಕಿ ದೂ. 9845196014, ಸುನಿತಾ ದಾಮೋದರ್ ಮೂಲ್ಕಿ 8861448713, ಭಾಸ್ಕರ ಪೂಜಾರಿ ಬೆಂಗಳೂರು 9972498947, ಸುಶೀಲ ಚಂದ್ರಶೇಖರ್ ಬೆಂಗಳೂರು 9916040381 ಅವರನ್ನು ಸಂಪರ್ಕಿಸುವಂತೆ ಹಾಗೂ ಅರ್ಜಿಗಳನ್ನು ಮೂಲ್ಕಿ ಬಿಲ್ಲವ ಸಂಘ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪಡೆಯುವಂತೆ ಕಾರ್ಯದರ್ಶಿ ಭಾಸ್ಕರ ಪೂಜಾರಿ ತಿಳಿಸಿದರು.
ಗೋಷ್ಠಿಯಲ್ಲಿ ಕುದ್ರೋಳಿ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಯಧೀಶ್ ಅಮೀನ್, ಕಾರ್ಯದರ್ಶಿ ಗೋಪಿನಾಥ ಪಡಂಗ, ಮಹಿಳಾ ಮಂಡಲಿ ಅಧ್ಯಕ್ಷೆ ಸುನಿತಾ ದಾಮೋದರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

