ಬಿಜೆಪಿ ಮಾತಿಗೆ ಮರುಳಾಗಬೇಡಿ, ಕಾಂಗ್ರೆಸ್ ಬೆಂಬಲಿಸಿ: ನಂಜುಂಡಿ
ಮಂಗಳೂರು: ಬಿಜೆಪಿ ಮರಳು ಮಾತಿಗೆ ಬಲಿಯಾಗದೆ ಯುವಕರು ಮತ್ತು ಮಹಿಳೆಯರು ಸಮಾಜ ಕಾಳಜಿಗಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಪಿ. ನಂಜುಂಡಿ ಹೇಳಿದರು.
ಸೋಮವಾರ ಮಂಗಳೂರಲ್ಲಿ ವಿಶ್ವಕರ್ಮ ಸಮುದಾಯದ ಸಭೆಯಲ್ಲಿ ಮಾತನಾಡಿದರು. ಬಿಜೆಪಿಯ ಹಿಂದುತ್ವದ ಪೊಳ್ಳು ಮಾತಿಗೆ ಮರುಳಾಗಿ ಹಿಂದುಳಿದ ವರ್ಗಗಳ ಯುವಕರು ಕೆಟ್ಟ ಹೋರಾಟಗಳಲ್ಲಿ ತೊಡಗಿಕೊಂಡು ಜೈಲಿನಲ್ಲಿ ಕೊಳೆಯುವ ಸ್ಥಿತಿ ಇದೆ. ಅವರೆಲ್ಲ ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿಕೊಂಡು ಅವರವರ ಸಮಾಜ ಪ್ರಗತಿ ಮಾಡಬೇಕು. ವಿಶ್ವಕರ್ಮ ಸಮಾಜದವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿ. ಜನಾರ್ದನ ಪೂಜಾರಿಯನ್ನು ಬೆಂಬಲಿಸಬೇಕು ಎಂದರು.
ಜನಾರ್ದನ ಪೂಜಾರಿ ಕಳೆದ ಬಾರಿ ಸೋತರೂ ಐದು ವರ್ಷ ಕೆಲಸ ಮಾಡಿದ್ದಾರೆ. ಪೂಜಾರಿ ಜಾತಿಗೆ, ಕ್ಷೇತ್ರಕ್ಕೆ ಮಾತ್ರ ಸೀಮತರಲ್ಲ, ಅವರು ರಾಷ್ಟ್ರ ನಾಯಕ. ಕುದ್ರೋಳಿ ದೇವಸ್ಥಾನದಲ್ಲಿ ಶಿಲ್ಪಕಲೆಗಳಲ್ಲಿ ಎಲ್ಲೆಡೆ ವಿಶ್ವಕರ್ಮ ಸಮಾಜದ ಹೆಸರು ಅಭಿಮಾನದಿಂದ ಹಾಕಿದ್ದಾರೆ. ಅವರನ್ನು ಗೆಲ್ಲಿಸುವ ಮೂಲಕ ಕರ್ನಾಟಕ ಅಭಿವೃದ್ಧಿಗೆ ಕಾಣಿಕೆ ನೀಡಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಕ್ತಿ ತುಂಬಬಹುದು ಎಂದರು.
ಹಿಂದೆಲ್ಲ ವಿಶ್ವಕರ್ಮ ಸಮಾಜದವರೆಲ್ಲ ಬಿಜೆಪಿಯಲ್ಲಿದ್ದಾರೆ ಎಂಬ ಭಾವನೆ ಮೂಡಿಸಿದ್ದರು. ಆದರೆ ಕಳೆದ ಉಡುಪಿ ಕ್ಷೇತ್ರ ಲೋಕಸಭೆ ಚುನಾವಣೆಯಲ್ಲಿ ಸಮಾಜದವರು ಕಾಂಗ್ರೆಸ್ ಬೆಂಬಲಿಸುವ ಮೂಲಕ ಜಯಪ್ರಕಾಶ್ ಹೆಗ್ಡೆಯನ್ನು ಗೆಲ್ಲಿಸಿದರು. ಬೈಂದೂರು, ಉಡುಪಿಯಲ್ಲಿ ವಿಶ್ವಕರ್ಮ ಸಮಾಜ ಬಾಂಧವರ ಸಭೆ ಮಾಡಿ, ಸಮಾಜ ಪ್ರಗತಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಮನ ಮಾಡಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

