ದಕ್ಷಿಣ ಕನ್ನಡ

ಗುಜರಾತ್ ಬೇಡ, ಮಂಗಳೂರು ಮಾದರಿ ಸಾಕು: ಗೋವಾ ಮಾಜಿ ಸಿಎಂ ಲುಜಿನ್ಹೊ

Published On :

ಮಂಗಳೂರು: ಮಂಗಳೂರು ಮಾನವ ಅಭಿವೃದ್ಧಿ ಸೂಚ್ಯಂಕ, ಶಿಕ್ಷಣ ಮತ್ತು ಅಭಿವೃದ್ಧಿಯಲ್ಲಿ ಮುಂದಿದೆ. ಕರ್ನಾಟಕಕ್ಕೆ ಗುಜರಾತ್ ಮಾದರಿ ಬೇಡ. ಇಲ್ಲಿಗೆ ಮಂಗಳೂರು ಮಾದರಿ ಸಾಕು ಎಂದು ಗೋವಾ ಮಾಜಿ ಮುಖ್ಯಮಂತ್ರಿ ಲುಜಿನ್ಹೊ ಫಲೇರಿಯಸ್ ಹೇಳಿದರು.
ಗುಜರಾತ್‌ನ ಗೋಧ್ರಾ ಮಾದರಿ ಎಲ್ಲಿಯೂ ಮರುಕಳಿಸುವುದು ಬೇಡ. ಅಲ್ಲಿನ ಆಡಳಿತ ಮಾದರಿಯೂ ಬೇಡ. ಅಲ್ಲಿ ಮಕ್ಕಳು ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 4.5 ಲಕ್ಷ ತೋಟಗಳಿಗೆ ಇನ್ನೂ ವಿದ್ಯುತ್ ಸೌಲಭ್ಯ ಸಿಕ್ಕಿಲ್ಲ. ಮಹಾರಾಷ್ಟ್ರದಂತಹ ದೊಡ್ಡ ರಾಜ್ಯಗಳಿಗೆ ಗುಜರಾತ್‌ನಂತ ಸಣ್ಣ ರಾಜ್ಯಗಳು ಮಾದರಿಯಾಗದು. ಪ್ರತಿ ರಾಜ್ಯವೂ ಭಿನ್ನವಾಗಿರುತ್ತದೆ ಎಂದರು.
ಆಶಯವನ್ನು ಹಕ್ಕು ಮಾಡಿದ್ದೇವೆ: ಆಸ್ಕರ್
ಸಂವಿಧಾನದಲ್ಲಿ ಹೇಳಿರುವ ಆಶಯಗಳನ್ನು ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದ ಕೀರ್ತಿ ಯುಪಿಎ2 ಸರ್ಕಾರಕ್ಕೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಹೇಳಿದರು.
ಬಡವರಿಗೆ ಉದ್ಯೋಗ, ಶಿಕ್ಷಣ ಹಕ್ಕು, ಆಹಾರ ಭದ್ರತೆ ನೀಡಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಹಳ್ಳಿ ಹಳ್ಳಿಯ ಬಡವರಿಗೆ ಉಪಯೋಗವಾಗಿದೆ ಎಂದರು.
ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುತ್ತಿಲ್ಲ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಆಸ್ಕರ್, ಪಕ್ಷ ನಿರ್ದೇಶನದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆಡಳಿತದಲ್ಲಿ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪತ್ನಿ ವಿಚಾರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿ ಆಸ್ಕರ್ ಈ ವಿಚಾರವನ್ನು ಮೋದಿ ಹತ್ತಿರವೇ ಕೇಳಿ ಎಂದರು.  ಸುದ್ದಿಗೋಷ್ಠಿಯಲ್ಲಿ ಶಿಲ್ಲಾಂಗ್ ಸಂಸದ ವಿನ್ಸೆಂಟ್ ಪಾಲ, ಮಂಗಳೂರು ಶಾಸಕ ಜೆ.ಆರ್.ಲೋಬೋ, ಮೊಯ್ದಿನ್ ಬಾವ, ಮೇಯರ್ ಮಹಾಬಲ ಮಾರ್ಲ, ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.