ದಕ್ಷಿಣ ಕನ್ನಡ

ಚುನಾವಣೆ ಸುಧಾರಣೆಗೆ ಸಿಬ್ಬಂದಿಯಿಂದ ಅಭಿಪ್ರಾಯ ಸಂಗ್ರಹ

Published On :

ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯಿಂದ ಚುನಾವಣೆ ಸಿದ್ಧತೆ ಕುರಿತು ಜಿಲ್ಲಾಡಳಿತ ಈ ಬಾರಿ ಲಿಖಿತ ಅಭಿಪ್ರಾಯ ಪಡೆಯುತ್ತಿದೆ. ಚುನಾವಣೆ ಕರ್ತವ್ಯಕ್ಕೆ ನೀಡಿದ ತರಬೇತಿಯಿಂದ ತೊಡಗಿ ಡಿಮಸ್ಟರಿಂಗ್ ವರೆಗೆ ಹಾಗೂ ಚುನಾವಣೆ ವ್ಯವಸ್ಥೆ ಸಬಲೀಕರಣ ಬಗ್ಗೆ 15 ಅಂಶಗಳನ್ನು ಭರ್ತಿ ಮಾಡಿ ಪತ್ರಕವನ್ನು ಕೊಡಬೇಕು. ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸುಧಾರಣೆ ತರುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎ.ಬಿ.ಇಬ್ರಾಹಿಂ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಜಿಲ್ಲೆಯ 1766 ಮತಗಟ್ಟೆ ಪೈಕಿ 29 ಮತಗಟ್ಟೆಗಳನ್ನು ಮಾದರಿ ಮತಗಟ್ಟೆ ಎಂದು ಗುರುತಿಸಲು ಉದ್ದೇಶಿಸಲಾಗಿದೆ. ಅಂದರೆ ಮತಗಟ್ಟೆಯನ್ನು ಸ್ವಚ್ಛವಾಗಿಟ್ಟು, ಮತದಾರರಿಗೆ ಮತದಾನಕ್ಕೆ ವಿಶೇಷ ಸೌಲಭ್ಯ ಕಲ್ಪಿಸುವುದು. ಮೂಡುಬಿದಿರೆ-3, ಮಂಗಳೂರು ಉತ್ತರ-5, ಮಂಗಳೂರು ದಕ್ಷಿಣ-2, ಮಂಗಳೂರು-2, ಬಂಟ್ವಾಳ-10, ಪುತ್ತೂರು-2, ಸುಳ್ಯ-3 ಮತಗಟ್ಟೆಯನ್ನು ಆಯ್ಕೆ ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಇಂಥ ಯಾವುದೇ ಮತಗಟ್ಟೆ ಇಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.